Advertisement
ಈ ರ್ಯಾಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿ ಸುತ್ತಿದ್ದಾರೆ. ನವ್ಸಾರಿ, ಅಂಕಲೇಶ್ವರ ಮತ್ತು ರಾಜ್‌ಕೋಟ್ ಪೂರ್ವದಲ್ಲಿ ನಡೆಯಲಿರುವ ಚುನಾವಣಾ ರ್ಯಾಲಿಗಳಲ್ಲಿ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
1995ರಿಂದ ಇಲ್ಲಿಯವೆರೆಗೆ ಸತತವಾಗಿ ಆರು ಅವಧಿಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಗುಜರಾತ್ ಸಿಎಂ ಆಗಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ರಾಜ್ಯದ ಅಭಿವೃದ್ಧಿ ಪಥ ವನ್ನೇ ಮುಂದಿನ ಹಂತಕ್ಕೆ ತೆಗದುಕೊಂಡು ಹೋಗಿ ದ್ದರು.ಈ ಹಿಂದಿನ ಚುನಾವಣೆಗಳಲ್ಲಿ ಭಾರಿ ಬಹುಮತಕ್ಕೆ ಹೋಲಿಸಿದರೆ ಕಳೆದ ಬಾರಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಮಾತ್ರ ಬಿಜೆಪಿಗೆ ಶಕ್ತವಾಯಿತು.
ಬಿಜೆಪಿ ಭದ್ರ ಕೋಟೆಯನ್ನು ಭೇದಿಸಲು ಕಾಂಗ್ರೆಸ್ ಮತ್ತು ಆಪ್ ಮುಂದಾಗಿದೆ. ಈಗಾಗಲೇ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇನ್ನೊಂದೆಡೆ, ಕೆಲವು ದಿನಗಳ ಹಿಂದೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಗೊಳಿಸಿದ ಕಾಂಗ್ರೆಸ್, ರಾಜ್ಯಾದ್ಯಂತ ಬೃಹತ್ ಪ್ರಚಾರ ರ್ಯಾಲಿ ಗಳನ್ನು ಆಯೋಜಿಸಿದೆ.
ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಪ್ರಮುಖರು:
ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನರೇಂದ್ರ ಸಿಂಗ್ ತೋಮರ್, ಅನುರಾಗ್ ಠಾಕೂರ್, ಜನರಲ್ ವಿ.ಕೆ.ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್.