ತುಮಕೂರು: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿದ್ದು, ಈ ಸಂಬಂಧರಾಜ್ಯಾದ್ಯಂತ ಕೈಗೊಂಡಿ ರುವ ವಿಜಯ ಸಂಕಲ್ಪ ಯಾತ್ರೆ ತುಮಕೂರಿನಲ್ಲಿಯೂ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು.
ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯ ಕರ್ತರು ಹಾಗೂ ಮುಖಂಡರುಗಳನ್ನು ಸೇರಿಸಿ ಕೊಂಡು ಈ ವಿಜಯ ಸಂಕಲ್ಪ ಯಾತ್ರೆ ಮಾಡಲು ಮಾ.5ರಂದು ನಿಗದಿಮಾಡಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಂದು ಬಾರದ ಹಿನ್ನೆಲೆಯಲ್ಲಿ ವಿಜಯ ಯಾತ್ರೆ ಮುಂದೂಡಲಾಗಿದೆ ಎಂದರು. ಮತ್ತೂಮ್ಮೆ ಮೋದಿ ಎಲ್ಲರ ಧ್ವನಿ: ಲೋಕಸಭಾ ಚುನಾವಣೆಗೆ ಎಲ್ಲಾ ರೀತಿ ಸಿದ್ಧತೆಯನ್ನು ಚುನಾವಣಾ ಆಯೋಗ ಮಾಡಿಕೊಂಡಿದೆ. ಇನ್ನೂ ದಿನಾಂಕ ಘೋಷಣೆ ಅಷ್ಟೇ ಬಾಕಿ ಇದೆ. ಈಗಾಗಲೇ ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿಯಾಗ ಬೇಕು ಎಂಬುದು ಎಲ್ಲರ ಧ್ವನಿಯಾಗಿದೆ ಎಂದು ಹೇಳಿದರು.
ಒಂದೇ ದೋಣಿಯಲ್ಲಿ ಕೊಂಡೊಯ್ಯುವ ಪ್ರಯತ್ನ: ತುಮಕೂರಿನಲ್ಲಿ ಬಿಜೆಪಿ, ಕೆಜೆಪಿ ಎಂಬ ಆಂತರಿಕ ವಿಚಾರಗಳು ಮುಂದುವರಿದಿವೆ. ಇಲ್ಲಿ ಒಂದಾಗುವ ಲಕ್ಷಣಗಳು ಅಥವಾ ಚುನಾವಣೆಯಲ್ಲಿ ಮತ್ತೂಮ್ಮೆ ಕವಲು ದಾರಿಯಲ್ಲಿ ಹೋಗುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಜತೆ ದೂರವಾಣಿಯಲ್ಲಿ ಮಾತನಾಡುವ ಪ್ರಯತ್ನ ಮಾಡಿದ್ದೇವೆ. ಆದರೆ, ಅವರು ದೂರವಾಣಿ ಸಂಪರ್ಕಕ್ಕೆ ಸಿಕ್ಕಿಲ್ಲ. ಮತ್ತೂಮ್ಮೆ ಪ್ರಯತ್ನಿಸುತ್ತೇವೆ. ವಿಜಯ ಸಂಕಲ್ಪ ಯಾತ್ರೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಭಾಗವಹಿಸುವ ಸಾಧ್ಯತೆ ಇದೆ. ಎಲ್ಲರೂ ಒಂದಾಗಿ ಒಂದೇ ದೋಣಿಯಲ್ಲ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ಲೋಕಸಭಾ ಚುನಾವಣೆಗೆ ಮಾಜಿ ಸಂಸದ ಜಿ.ಎಸ್.ಬಸವರಾಜ…, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಸುರೇಶ್ ಗೌಡ, ವಿಧಾನಸಭಾ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಟಿಕೆಟ್ ಆಕಾಂಕ್ಷಿಗಳಾಗಿ¨ªಾರೆಎಂದರು.
ಮಾಜಿ ಸಂಸದ ಬಸವರಾಜು ಅವರಿಗೆ ಟಿಕೆಟ್ ಖಚಿತವಾಗಿ ಸಿಗುತ್ತದೆಯೇ ಎಂಬ ಪ್ರಶ್ನೆಗೆ, ಟಿಕೆಟ್ ನೀಡುವುದು ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟದ್ದು. ಆ ಬಗ್ಗೆ ನಾನೇನೂ ಹೇಳಲಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್. ಶಿವಪ್ರಸಾದ್, ಮುಖಂಡರಾದ ಹೆಬ್ಟಾಕ ರವಿಶಂಕರ್, ಟಿ.ಆರ್. ಸದಾಶಿವಯ್ಯ, ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು.