Advertisement

Ramadurga ದಲ್ಲಿ ಬಿಜೆಪಿ ಬಂಡಾಯ ಶಮನ: ನಾಮಪತ್ರ ಹಿಂಪಡೆದ ಹಾಲಿ ಶಾಸಕ ಮಹದೇವಪ್ಪ ಯಾದವಾಡ

05:43 PM Apr 24, 2023 | Team Udayavani |

ಬೆಳಗಾವಿ: ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಎದುರಾಗಿದ್ದ ಬಂಡಾಯದ ಭೀತಿ ದೂರವಾಗಿದೆ. ಹಾಲಿ ಶಾಸಕ ಮಹದೇವಪ್ಪ ಯಾದವಾಡ ಸೇರಿದಂತೆ ಐವರು ಬಿಜೆಪಿ ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರೊಂದಿಗೆ ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣ ಅವರ ಮುಂದಿನ ಹಾದಿ ಸುಗಮವಾದಂತಾಗಿದೆ.

Advertisement

ಹಾಲಿ ಶಾಸಕ ಮಹದೇವಪ್ಪ ಯಾದವಾಡ ತಮಗೆ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷದ ವರಿಷ್ಠರ ವಿರುದ್ಧ ಅಸಮಾಧಾನ ಗೊಂಡು ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದರು. ಮಹಾದೇವಪ್ಪ ಯಾದವಾಡ ಅಲ್ಲದೆ ಅವರ ಸಹೋದರ ಮಲ್ಲಪ್ಪ ಯಾದವಾಡ. ಪಿ ಎಫ್ ಪಾಟೀಲ ಸೇರಿದಂತೆ ನಾಲ್ವರು ಬಂಡಾಯ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಇದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿತ್ತು.

ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಸಮಾಧಾನಗೊಳಿಸಿ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಪಕ್ಷದ ಹಿರಿಯ ನಾಯಕರು ನಿರಂತರ ಪ್ರಯತ್ನ ನಡೆಸಿದ್ದರು. ಈ ಎಲ್ಲ ನಾಯಕರ ಪ್ರಯತ್ನ ಫಲಕೊಟ್ಟಿದ್ದು ಮಹದೇವಪ್ಪ ಯಾದವಾಡ ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಲ್ಲದೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವದಾಗಿ ಹೇಳಿದರು.

ಇದನ್ನೂ ಓದಿ: Sudan ನಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ‘ಆಪರೇಷನ್ ಕಾವೇರಿ’ ಪ್ರಾರಂಭ

Advertisement

Udayavani is now on Telegram. Click here to join our channel and stay updated with the latest news.

Next