Advertisement

BJP ಮೂರನೇ ಪಟ್ಟಿ ಬಿಡುಗಡೆ: ಅಣ್ಣಾಮಲೈ, ತಮಿಳಿಸೈ ಕಣಕ್ಕೆ

06:22 PM Mar 21, 2024 | Team Udayavani |

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಕೊಯಮತ್ತೂರಿನಿಂದ ಕಣಕ್ಕಿಳಿಯಲಿದ್ದಾರೆ.

Advertisement

ರಾಜ್ಯಪಾಲೆ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದ ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣದಿಂದ ಮತ್ತು ನೀಲಗಿರಿಯಿಂದ ಕೇಂದ್ರ ಸಚಿವ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ಸ್ಪರ್ಧಿಸಲಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿ ಈ ಬಾರಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹರಸಾಹಸ ನಡೆಸುತ್ತಿದ್ದು, ಆಡಳಿತಾರೂಢ ಡಿಎಂಕೆ ಮೈತ್ರಿಕೂಟ ಮತ್ತು ಎಐಡಿಎಂಕೆ ಮೈತ್ರಿಕೂಟಕ್ಕೆ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸವಾಲು ಒಡ್ಡುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next