ತ್ರಿಪುರ: ಮುಂಬರುವ ತ್ರಿಪುರಾ ಚುನಾವಣೆಗೆ ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಶನಿವಾರ 48 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಟೌನ್ ಬೋರ್ಡೋವಾಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಉಳಿದ 12 ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಬಿಜೆಪಿ ಹೇಳಿದೆ.
ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಧನಪತ್ ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಪಕ್ಷದ ಮುಖಂಡರಾದ ಅನಿಲ್ ಬಲುನಿ ಮತ್ತು ಸಂಬಿತ್ ಪಾತ್ರ ಅವರು ಶನಿವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ತ್ರಿಪುರಾ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದರು.
ಮುಂಬರುವ ತ್ರಿಪುರಾ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿತು.
ಅದರಂತೆ ಶನಿವಾರ 48 ಅಭ್ಯರ್ಥಿಗಳ ಪಟ್ಟಿ ಯನ್ನು ಬಿಡುಗಡೆ ಮಾಡಿದ್ದು ಇನ್ನುಳಿದ ಹನ್ನೆರಡು ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ.