Advertisement

ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆಗೆ ಬಿಜೆಪಿ ಆಗ್ರಹ

03:45 AM Feb 11, 2017 | |

ವಿಧಾನ ಪರಿಷತ್‌: 1ರಿಂದ 10ನೇ ತರಗತಿವರೆಗಿನ ಪಠ್ಯಪುಸ್ತಕಗಳ ಪರಿಷ್ಕರಣೆ ಬಳಿಕ ಚರ್ಚೆಗೆ ಅವಕಾಶ ನೀಡದೆ ನೇರವಾಗಿ ಮುದ್ರಣಕ್ಕೆ ಕಳುಹಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ನಿಲುವಳಿ ಸೂಚನೆ ಮಂಡಿಸಲು ಯತ್ನಿಸಿದ ಪ್ರಸಂಗ ನಡೆಯಿತು.

Advertisement

ಶುಕ್ರವಾರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿಯ ಅರುಣ್‌ ಶಹಾಪುರ ನಿಲುವಳಿ ಸೂಚನೆ ಮಂಡಿಸಲು ಮುಂದಾದಾಗ ಆಕ್ಷೇಪ ವ್ಯಕ್ತಪಡಿಸಿದ ಸಭಾನಾಯಕ ಡಾ.ಜಿ.ಪರಮೇಶ್ವರ್‌, “ಪ್ರಶ್ನೋತ್ತರ ವೇಳೆಯಲ್ಲಿ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದು
ಸರಿಯಲ್ಲ. ಸದಸ್ಯರು ಪ್ರಸ್ತಾಪಿಸಿರುವ ವಿಷಯದ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ದವಿದೆ. ಪ್ರಶ್ನೋತ್ತರ ಕಲಾಪ ಮೊದಲು ನಡೆಯಲಿ’ ಎಂದರು.

ಆಗ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ, “ಕಲಾಪ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಗಂಭೀರ ವಿಷಯವಿದ್ದಾಗ ಪ್ರಶ್ನೋತ್ತರ ಕಲಾಪ ಬದಿಗೊತ್ತಿ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡಬೇಕು’ ಎಂದು ಮನವಿ ಮಾಡಿದರು. ನಂತರ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ, “ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಇತರೆ ವಿಷಯ ಪ್ರಸ್ತಾಪಿಸಬೇಕೆಂಬ ನಿಯಮವಿದೆ.
ಆದರೆ ಒಂದೂವರೆ ವರ್ಷದ ಹಿಂದೆ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಹಿರಿಯ ಸದಸ್ಯರು 5 ರಿಂದ 8 ನಿಮಿಷ ಪೂರ್ವಭಾವಿ
ಯಾಗಿ ವಿಷಯ ಪ್ರಸ್ತಾಪಿಸಲು ಅವಕಾಶ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ವಿಷಯ ಪ್ರಸ್ತಾವಕ್ಕೆ ಅವಕಾಶ ನೀಡಲಾಗುವುದು. ಅದನ್ನು ಒಪ್ಪುವುದು, ತಿರಸ್ಕರಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರ’ ಎಂದರು.

ಈ ವೇಳೆ ಪರಮೇಶ್ವರ್‌ ಮಾತನಾಡಿ, ಪಠ್ಯಪುಸ್ತಕಗಳ ಪರಿಷ್ಕರಣೆ ವಿಷಯದ ಬಗ್ಗೆ ಚರ್ಚಿಸಲು ಸರ್ಕಾರ ಸಿದಟಛಿವಿದೆ. ಆದರೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ಬೇಡ ಎಂದರು. ಆ ಹಿನ್ನೆಲೆಯಲ್ಲಿ ಸಭಾಪತಿಗಳು, ನಿಯಮ 68ರಡಿ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಪ್ರಕಟಿಸುವ ಮೂಲಕ ಚರ್ಚೆಗೆ ತೆರೆ ಎಳೆದರು.

Advertisement

Udayavani is now on Telegram. Click here to join our channel and stay updated with the latest news.

Next