Advertisement

ಫಲಿತಾಂಶ ಜಾತಿವಾದ, ಕುಟುಂಬ ರಾಜಕಾರಣಕ್ಕೆ ತಕ್ಕ ಪಾಠ: ಅಮಿತ್ ಶಾ

04:28 PM Mar 11, 2017 | Sharanya Alva |

ನವದೆಹಲಿ:ಉತ್ತರಪ್ರದೇಶ, ಉತ್ತರಾಖಂಡ್ ನಲ್ಲಿ ಜನ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ನಾಲ್ಕು ರಾಜ್ಯಗಳಲ್ಲಿ(ಯುಪಿ, ಉತ್ತರಾಖಂಡ್, ಗೋವಾ, ಮಣಿಪುರ) ಬಿಜೆಪಿ ಸರ್ಕಾರ ರಚಿಸಲಿದೆ. ದೇಶದ ಜನತೆಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ಜಾತಿವಾದ ಮತ್ತು ಕುಟುಂಬ ರಾಜಕಾರಣಕ್ಕೆ ಜನ ಮನ್ನಣೆ ನೀಡಿಲ್ಲ ಎಂಬುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

Advertisement

ಪಂಚರಾಜ್ಯಗಳ ಫಲಿತಾಂಶ ಪ್ರಕಟವಾದ ನಂತರ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶನಿವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನೋಟು ಅಮಾನಗದೀಕರಣ ಹಾಗೂ ಜನಧನ್ ಗೆ ಜನ ಮನ್ನಣೆ ನೀಡಿದ್ದಾರೆ ಎಂಬುದಕ್ಕೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಪಪ್ರಚಾರ ಮಾಡಿದವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಶಾ ವಿಪಕ್ಷಗಳಿಗೆ ಟಾಂಗ್ ನೀಡಿದರು. 

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಿ ಮತದಾನ ಮಾಡಿದ್ದಾರೆ.ಇದರಲ್ಲಿ ಹಿಂದು, ಮುಸ್ಲಿಂ ಯಾವ ಭೇದವೂ ಇಲ್ಲ. ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಜನಾದೇಶ. ಬಿಜೆಪಿಯ ಗೆಲುವು ಮತದಾರರ ಇಚ್ಚಾಶಕ್ತಿಯ ಗೆಲುವು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next