Advertisement

ಬಡವರ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಲು ಬಿಜೆಪಿಗೆ ನಾಚಿಕೆಯಾಗಬೇಕು: ಶರಣಪ್ರಕಾಶ್ ಪಾಟೀಲ್

01:07 PM Jun 19, 2023 | Team Udayavani |

ರಾಯಚೂರು: ಬಡವರಿಗೆ 10 ಕೆಜಿ ಅಕ್ಕಿ ನೀಡಲು ಮುಂದಾದಾಗ ಕೇಂದ್ರ ಸರ್ಕಾರ ಅಕ್ಕಿ ನೀಡುವುದಿಲ್ಲ ಎನ್ನುತ್ತಿರುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಟೀಕಿಸಿದರು.

Advertisement

ಸಮೀಪದ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವೇನು ಪುಕ್ಸಟೆ ಅಕ್ಕಿ ಕೇಳುತ್ತಿಲ್ಲ. ಎಫ್ ಸಿಐನಲ್ಲಿ ಸಾಕಷ್ಟು ಅಕ್ಕಿ ಕೊಳೆಯುತ್ತಿದೆ. ಕೇಂದ್ರ ಸರ್ಕಾರ ಮೊದಲು ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆ ಕ್ಷಣದಲ್ಲಿ ಕೊಡಲಾಗುವುದಿಲ್ಲ ಎನ್ನುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರಿಸಲಿ ಎಂದರು.

ಗ್ಯಾರೆಂಟಿಗಳ ಜಾರಿಯಿಂದ ಅಭಿವೃದ್ಧಿಗೆ ಅನುದಾನದ ತೊಡಕಾಗದು. 13 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಅನುದಾನ ನಿರ್ವಹಣೆ ಬಗ್ಗೆ‌ ಸಮಗ್ರ ಮಾಹಿತಿ ಇದೆ.  ಈಗ ವಿದ್ಯುತ್ ಬಿಲ್ ಹೆಚ್ಚಾಗಿರುವುದು ಬಿಜೆಪಿಯವರ ಕೊಡುಗೆಯಾಗಿದೆ. ಮುಂದಿನ ತಿಂಗಳಿಂದ ವಿದ್ಯುತ್ ಬಿಲ್ ಬರುವುದಿಲ್ಲ. ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾದಲ್ಲಿ ಆ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಲಿದೆ ಎಂದರು.

ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದ್ದು, ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೂ ಅರ್ಜಿ ಸ್ವೀಕರಿಸಲಾಗುತ್ತಿದೆ. ಸರ್ವರ್ ಸಮಸ್ಯೆ ಉಂಟಾಗಿದ್ದು ಬಗೆ ಹರಿಸಲಾಗುವುದು ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next