Advertisement

BJP: ಸಿದ್ದರಾಮಯ್ಯ, ಡಿಕೆಶಿ ಜೊತೆ ಹೊಂದಾಣಿಕೆಗೆ ಅಧ್ಯಕ್ಷ ಮಾಡಿಲ್ಲ‌, ಹುಷಾರ್: ಲಿಂಬಾವಳಿ

10:31 PM Dec 01, 2024 | Team Udayavani |

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ‌ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali) ಎಚ್ಚರಿಕೆ ಕೊಟ್ಟಿದ್ದಾರೆ.

Advertisement

ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ನಡೆಸಿದರು.  ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಬೀದರ್​ದಿಂದ ವಕ್ಫ್​ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ‌? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು ಎಂದು ಪ್ರಶ್ನಿಸಿದರು.

ಪಕ್ಷ ಕಟ್ಟಿದವರು ನಾವು: 
ವಕ್ಫ್‌  ಎನ್ನುವುದು ದೇಶಕ್ಕೆ ಹಿಡಿದಿರುವ ಕ್ಯಾನ್ಸರ್‌. ಈ ರೋಗಕ್ಕೆ ಮದ್ದು ನೀಡಲು ಶಾಸಕ ಬಸನಗೌಡ ಯತ್ನಾಳ ಹೋರಾಟ ಆರಂಭಿಸಿದ್ದಾರೆ. ಸುಮ್ಮನೆ ಇದ್ದರೆ ನಮ್ಮ ಮನೆಗೂ ಈ ದೆವ್ವ ಸೇರಿಕೊಳ್ಳುತ್ತದೆ. ಪಕ್ಷ ಕಟ್ಟಿದವರು ನಾವು, ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ. ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರು ವಕ್ಫ್​ ಬೋರ್ಡ್ ನಿಷೇಧಿಸಿದ್ದಾರೆ ಅವರಿಗೆ ಅಭಿನಂದಿಸಬೇಕು.

ಲೋಕಸಭೆಯಲ್ಲಿ 7 ಸೀಟು ಸೋತರೂ ಯಡಿಯೂರಪ್ಪ ಆತ್ಮಾವಲೋಕನ ಮಾಡಿಕೊಳ್ಳಲಿಲ್ಲ. ಯಾರಿಗೂ ಕರೆ ಮಾಡಲಿಲ್ಲ. ವಾಲ್ಮೀಕಿ ಹಗರಣದ ವಿರುದ್ಧ ನಾವು ನಡೆಸಲು ಉದ್ದೇಶಿಸಿದ್ದ ಪಾದಯಾತ್ರೆಗೂ ಅನುಮತಿ ಕೊಡಿಸಲಿಲ್ಲ.  ಈಗ ಜನಪರ ಕೆಲಸಕ್ಕಾಗಿ ಹೋರಾಟ ಶುರುವಾಗಿದೆ. ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next