ಬೆಂಗಳೂರು: ಭ್ರಷ್ಟಾತಿ ಭ್ರಷ್ಟ ಎಂಎಂಕೆ! ಹಲವು ದಶಕಗಳಿಂದ ಕಲ್ಯಾಣ ಕರ್ನಾಟಕವನ್ನು ಲೂಟಿ ಮಾಡಿದ ಭ್ರಷ್ಟ ಕಾಂಗ್ರೆಸ್ಸಿಗನ ಸಂಕ್ಷಿಪ್ತ ಹೆಸರಿದು. ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತಿನ ಲೆಕ್ಕವನ್ನು ಜನರ ಮುಂದಿಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ? ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಬಿಜೆಪಿ ಕರ್ನಾಟಕ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಕುಟುಂಬದ ಹೆಸರಿನಲ್ಲಿ ದೇಶವನ್ನು ಕೊಳ್ಳೆ ಹೊಡೆದ ನಕಲಿ ಗಾಂಧಿ ಕುಟುಂಬದ ಆಸ್ತಿ ಎಷ್ಟೆಂದು ಯಾರಿಗಾದರೂ ಗೊತ್ತೇ? ಅದರಲ್ಲಿ ಬೇನಾಮಿ ಎಷ್ಟೆಂದು ಲೆಕ್ಕ ಹಾಕಿ ಹೇಳಲು ಸಾಧ್ಯವೇ ಕಾಂಗ್ರೆಸ್? ಕಾಂಗ್ರೆಸ್ ಮಾಡಿದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸೋನಿಯಾ ಗಾಂಧಿಯವರಿಗೆ ಪಾಲೆಷ್ಟು? ಎಂದು ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿರಂತರ 20 ವರ್ಷಗಳಿಂದ ಜನರಿಂದ ಆಯ್ಕೆಯಾಗಿ ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಧಾನಿಯ ಕುರಿತು ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಹಿಸಿ. ನಿಮ್ಮ ದುರಹಂಕಾರ, ದಾರ್ಷ್ಟ್ಯಕ್ಕಾಗಿ ಮಾಜಿ ಮುಖ್ಯಮಂತ್ರಿಯೊಬ್ಬರಿಂದ ನಿಮ್ಮ ಸಾಂವಿಧಾನಿಕ ಹುದ್ದೆಯ ಮೇಲೆ ಪ್ರಯೋಗವಾದ ಪದವನ್ನು ಹೇಗೆ ಅರಗಿಸಿಕೊಂಡಿರಿ ಎಂದಿದೆ.
ಇದನ್ನೂ ಓದಿ:ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಬೇಕು ಶಾಸಕ ಎಲ್.ಎನ್.ನಾರಾಯಣಸ್ವಾಮಿ
ಜನರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನ ಸೇವಕ ಅಲಂಕರಿಸಿರುವ ಪ್ರಧಾನಿ ಹುದ್ದೆಯ ಕುರಿತು ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲೇ ಉಳಿಯಬೇಕೆಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಬಿಜೆಪಿ ಟೀಕಿಸಿದೆ.
ಸಿದ್ದರಾಮಯ್ಯನವರೇ, ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ. ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ ನೀವು ಎಂದು ಬಿಜೆಪಿ ಪ್ರಶ್ನಿಸಿದೆ.