ಬೀದರ: ಕಾಂಗ್ರೆಸ್‌ಗೆ ಕ್ರೆಡಿಟ್ ಹೋಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹಿಂದೆ ಮಂಜೂರಾಗಿರುವ ವಸತಿ ಯೋಜನೆ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಿ ಹಣ ಬಿಡುಗಡೆಯನ್ನು ನಿಲ್ಲಿಸಿದೆ. ಹೀಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆೆ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ 16.38 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಇದ್ದು, 13 ಲಕ್ಷ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಅಕ್ರಮದ ಹೆಸರಿನಲ್ಲಿ 7 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಸ್ಥಗಿತ ಗೊಳಿಸಿ ಹಣ ಬಿಡುಗಡೆಯನ್ನೂ ನಿಲ್ಲಿಸಲಾಗಿದೆ. ಆ ಮೂಲಕ ರದ್ದುಗೊಳಿಸಿದ ಮನೆಗಳನ್ನು ಮತ್ತೂಮ್ಮೆ ಮಂಜೂರು ಮಾಡಲು ಸರ್ಕಾರ ಮುಂದಾಗಿದೆ. ಯೋಗ್ಯ ಮನೆಗಳಿಗೂ ಹಣ ಬಿಡುಗಡೆಗೆ ವಿಳಂಬ ಮಾಡಲಾಗುತ್ತಿದೆ. ಸಾಲ ಮಾಡಿ ಮನೆ ಕಟ್ಟಿಸಿಕೊಂಡಿರುವ ಫಲಾನು ಭವಿಗಳು ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ತಂದೊಡ್ಡಲಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರದ ಅಕ್ರಮ, ಸುಳ್ಳುಗಳನ್ನು ಬಯಲಿಗೆ ಎಳೆಯು ತ್ತೇನೆಂಬ ಕಾರಣಕ್ಕೆ ನನ್ನ ಕ್ಷೇತ್ರ ಭಾಲ್ಕಿ ಮೇಲೆ ಟಾರ್ಗೆಟ್ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ವಸತಿ ಯೋಜನೆ ಫಲಾನುಭವಿಗಳಿಗೆ ಬೋಗಸ್ ಹಕ್ಕು ಪತ್ರ ನೀಡಲಾಗಿದೆ ಎಂದು ತನಿಖೆಗೆ ಸೂಚಿಸಲಾಗಿದೆ. ತನಿಖೆ ಮಾಡುವುದು ತಪ್ಪಲ್ಲ. ಇದಕ್ಕೆ ಹೆದ ರುವುದಿಲ್ಲ. ತನಿಖೆ ನಡೆಸುವುದಾದರೇ ಇಡೀ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನಡೆಸಲಿ. ನನ್ನ ಕ್ಷೇತ್ರದಲ್ಲಿ 5 ವರ್ಷದಲ್ಲಿ 23,900 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ. ಮಂಜೂರಾತಿ ಆದೇಶವನ್ನು ರಾಜೀವ ಗಾಂ ಧಿ ವಸತಿ ನಿಗಮ ನೀಡಿದೆ ಎಂದು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಬಿಜೆಪಿ ನಾಯಕರು ಪ್ರಚೋದನಾತ್ಮಕ ಮತ್ತು ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಮಂಗಳೂರು ಗಲಭೆ ಕುರಿತಂತೆ ನ್ಯಾಯಾಂಗ ತನಿಖೆ ಮೂಲಕ ಸತ್ಯಾಂಶ ಬಹಿರಂಗ ಮಾಡಬೇಕು. ಮಾಜಿ ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಸಿಡಿ ಕಟ್ ಆ್ಯಂಡ್ ಪೆಸ್ಟ್ ಇದ್ದಲ್ಲಿ ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಲಿ.
-ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ