Advertisement

ಸವದತ್ತಿ ಎಲ್ಲಮ್ಮನೂ ಸಿದ್ದರಾಮಯ್ಯರನ್ನು ಕಾಪಾಡಲಾರಳು: ಬಿಜೆಪಿ ವ್ಯಂಗ್ಯ

01:03 PM Jul 02, 2022 | Team Udayavani |

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನು ಹತ್ತು ತಿಂಗಳು ಬಾಕಿಯಿದೆ. ಈಗಾಗಲೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಬಂದಿರುವ ರಾಜ್ಯ ಕಾಂಗ್ರೆಸ್ ಮುಖಂಡರು ವಿಧಾನಸಭಾ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಬೆಳಗಾವಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

Advertisement

ಈ ಹಿನ್ನೆಲೆ ಬಿಜೆಪಿಯು ಸಿದ್ದರಾಮೋತ್ಸವ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಅವರಿಂದಲೇ ಪಕ್ಷ ತೊರೆಯುತ್ತಿದ್ದಾರೆ ಎಂದು ದೂರಿದ್ದಾರೆ. ಸರಣಿ ಕೂ ಮಾಡಿರುವ ಬಿಜೆಪಿಯು, ಹಿಂದೂ ವಿರೋಧಿ ಧೋರಣೆಯಿಂದಲೇ ಸಿದ್ದರಾಮಯ್ಯ ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ. ಬದಾಮಿಯಲ್ಲೂ ಬನಶಂಕರಿಯ ಶಾಪ, ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು, ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ ಎಂದು ಹೇಳಿದೆ.

ಇದನ್ನೂ ಓದಿ:ಮಗನಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ವೈದ್ಯನಿಂದ ಹಣ ಪಡೆದು ನಕಲಿ ಹನಿಟ್ರ್ಯಾಪ್‌: ಬಂಧನ

Koo App

ಹಿಂದೂ ವಿರೋಧಿ ಧೋರಣೆಯಿಂದಲೇ #siddaramaiah ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. √ ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ √ ಬದಾಮಿಯಲ್ಲೂ ಬನಶಂಕರಿಯ ಶಾಪ √ ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ! #ಸಿದ್ದುಹಾಸ್ಯೋತ್ಸವ

Advertisement

BJP KARNATAKA (@BJP4Karnataka) 2 July 2022

ಆ ಧರ್ಮರಾಯನ ಹಿಂದೆಯೇ ಯಾರೂ ಬರಲಿಲ್ಲ, ನಿಮ್ಮಂತಹ ಅಧರ್ಮರಾಯನ ಹಿಂದೆ ಯಾರು ತಾನೇ ನಿಲ್ಲಬಲ್ಲರು ಸಿದ್ದರಾಮಯ್ಯ? ನಿಮ್ಮ ಉತ್ಸವ ನಾಲ್ಕು ಕುರ್ಚಿಗಳನ್ನು ತುಂಬಬಹುದೇ ಹೊರತು, ನಾಲ್ಕು ಸೀಟುಗಳನ್ನು ಗಳಿಸಿ ಕೊಡದು. ಸಿದ್ದರಾಮಯ್ಯನವರೇ, ಮೂಲ ಕಾಂಗ್ರೆಸ್ಸಿಗರು ನಿಮ್ಮಿಂದಾಗಿಯೇ ಪಕ್ಷ ತೊರೆಯುತ್ತಿರುವುದು ನಿಜವಲ್ಲವೇ ಎಂದು ಪ್ರಶ್ನಿಸಿದೆ.

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ನಾಂದಿ ಹಾಡುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯ ಅವರಿಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ ಎಂದು ವ್ಯಂಗ್ಯವಾಡಿದೆ.

ಆ ಭಾಗ್ಯ, ಈ ಭಾಗ್ಯ ಎಂದು ಘೋಷಣೆ ಮಾಡಿದ್ದೇ ಬಂತು, ಜನಪ್ರಿಯತೆ, ಪ್ರಚಾರಕ್ಕಾಗಿ ಮಾಡಿದ ಯಾವ ಕಾರ್ಯವೂ ಈಗ ಸಿದ್ದರಾಮಯ್ಯ ಸಹಾಯಕ್ಕೆ ಬರುತ್ತಿಲ್ಲ. ಹಲವು ಬಿಟ್ಟಿ ಭಾಗ್ಯ ನೀಡಿದ ಸಿದ್ದರಾಮಯ್ಯಗೆ ಈಗ ಕ್ಷೇತ್ರ ಭಾಗ್ಯದ ಫಲಾನುಭವಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಿಂತ ನಾಚಿಗಗೇಡಿನ ಸಂಗತಿ ಮತ್ತೊಂದಿದೆಯೇ? ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರ ಕುಮಾರನ ಪೌರುಷ ಅಷ್ಟೇ. ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ? ಎಂದು ಕೇಳಿದೆ.

ತಳಹದಿಯಿಲ್ಲದೆ ಮಹಡಿ ಮನೆ ಕಟ್ಟಲು ಸಿದ್ದರಾಮಯ್ಯ ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರಿಗೆ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗಲಾರದ ಪರಿಸ್ಥಿತಿ ಯಾವ ನಾಯಕರಿಗೂ ಬರಬಾರದು. ಸಿದ್ದರಾಮಯ್ಯನವರೇ, ಇದಕ್ಕಾಗಿ ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ ಎಂದು ರಾಜ್ಯ ಬಿಜೆಪಿ ಕುಹಕವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next