Advertisement

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ವಕ್ತಾರೆ ನೂಪುರ್ ಶರ್ಮಾ ಬಿಜೆಪಿಯಿಂದ ಅಮಾನತು

06:03 PM Jun 05, 2022 | Team Udayavani |

ನವದೆಹಲಿ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಹಿಂಸಾಚಾರಕ್ಕೆ ಕಾರಣವಾದ ದೂರದರ್ಶನ ಸುದ್ದಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆಗಳನ್ನ ನೀಡಿದ ನಂತರ ಬಿಜೆಪಿ ಭಾನುವಾರ (ಜೂನ್ 5) ಪಕ್ಷದ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

Advertisement

ಯಾವುದೇ ಧಾರ್ಮಿಕ ವ್ಯಕ್ತಿತ್ವದ ಅವಮಾನವನ್ನು ಪಕ್ಷವು ಬಲವಾಗಿ ಖಂಡಿಸುತ್ತದೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಅಂತಹವರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಹೇಳಿದೆ.

ಮಹಾರಾಷ್ಟ್ರದಲ್ಲಿ ನೂಪುರ್ ಶರ್ಮಾ ವಿರುದ್ಧ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಜೂನ್ 3 ರಂದು ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಅವರ ಕುರಿತಾಗಿನ ಹೇಳಿಕೆಯ ನಂತರ ಕಾನ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಒಟ್ಟು 29 ಮಂದಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next