Advertisement

Karnataka ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಮೋದಿಗೆ ಅಭಿನಂದನೆ

12:57 AM Jul 04, 2024 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ 10.30ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಪಕ್ಷ ಸಂಘಟನೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

Advertisement

ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯ ಚುನಾವಣ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಸಮಾರೋಪ ಸಭೆಯಲ್ಲಿ ಭಾಗಿಯಾಗುತ್ತಿರುವುದು ವಿಶೇಷ.

2 ಸಾವಿರ ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ. 3 ನಿರ್ಣಯ ಮಂಡನೆ ಯಾಗಲಿದ್ದು, 3ನೇ ಬಾರಿಗೆ ಪ್ರಧಾನಿಯಾಗಿರುವ ಮೋದಿ ಅವರಿಗೆ ಅಭಿನಂದನಾ ನಿರ್ಣಯ ಮಂಡಿಸಲಾಗುತ್ತದೆ. ಒಟ್ಟಾರೆಯಾಗಿ ಪಕ್ಷ ಸಂಘಟನ ವ್ಯವಸ್ಥೆ ಹೇಗಿರಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next