Advertisement
ಮಂಗಳವಾರ ಪಟ್ಟಣದ ವಿಯಜ ಸೋಶಿಯಲ್ ಕ್ಲಬ್‌ನಲ್ಲಿ ಪಧವೀದರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ತೆಕ್ಕೆಗೆ ಬಿದ್ದಿದ್ದು ಈ ಬಾರಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುವುದರೊಂದಿಗೆ ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಗೆಲ್ಲಲಿದ್ದೇವೆ ಕಾದು ನೋಡಿ ಎಂದರಲ್ಲದೇ ಸಂಖ್ಯಾಬಲ ಕೊರತೆ ಇದ್ದರೂ ಗೆಲುವು ನಿಶ್ಚಿತ ಎಂದರು.
Related Articles
Advertisement
ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದ್ದು ದಿನಕ್ಕೊಂದು ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ನೈತಿಕ ಗುಣಮಟ್ಟದ ಶಿಕ್ಷಣ ನೀಡುವ ಮುಖ್ಯ ಉದ್ದೇಶವಾಗಿದೆ ಎಂದರು. ಪರಿಷತ್ ಚುನಾವಣೆಯಲ್ಲಿ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಮತ್ತಿಬ್ಬರು ಉಗ್ರರ ಸಂಹಾರ; 2 ಮ್ಯಾಗ್ನೆಟಿಕ್ ಬಾಂಬ್ ಪತ್ತೆ
ಲೋಕಸಭಾ ಸದಸ್ಯೆ ಮಂಗಳಾ ಅಂಗಡಿ, ಶಾಸಕ ಮಹಾಂತೇಶ ದೊಡಗೌಡರ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಬಿಜೆಪಿ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕೆಂದರು.
ವೇದಿಕೆ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ಪ್ರತಾಪಸಿಂಹ ನಾಯ್ಕ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ, ಪುರಸಭೆ ಸದಸ್ಯ ಗುರು ಮೆಟಗುಡ್ಡ, ಸಂದೀಪ ದೇಶಪಾಂಡೆ, ಸುಭಾಸ ಪಾಟೀಲ, ವಿಭಾಗೀಯ ಸಂಘಟಕ ಕಾರ್ಯದರ್ಶಿ ಎಂ.ಸಿ.ಜಯಪ್ರಕಾಶ, ಬಸವರಾಜ ಪರವನ್ನವರ ಮುಂತಾದವರು ಇದ್ದರು.
ದುಂಡೇಶ ಗರಗದ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಪದವೀಧರರು, ಶಿಕ್ಷಕರು, ಬಿಜೆಪಿ ಕಾರ್ಯರ್ತರು ಇದ್ದರು.