Advertisement

ನಿಜವಾದ ಪೋಕರಿಗಳು, ಕಾಡು ಜನ ಯಾರು ಎಂದು ಸಾಬೀತಾಗಿದೆ: ನಳೀನ್ ಕಟೀಲ್

02:48 PM Dec 15, 2020 | keerthan |

ಮಂಗಳೂರು: ಈ ಹಿಂದೆ ಕಾಂಗ್ರೆಸ್ ಸದಸ್ಯರುಗಳು ಬಿಜೆಪಿಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದರು‌. ಈಗ, ನಿಜವಾದ ‘ಪೋಕರಿ’ಗಳು ಯಾರು ಅನಾಗರಿಕರು ಯಾರು, ಕಾಡುಜನ ಯಾರು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು.

Advertisement

ವಿಧಾನಪರಿಷತ್ ನಲ್ಲಿ ಇಂದು ನಡೆದ ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿದ ಅವರು, ಈಗೀಗ ಪೋಕರಿ ವರ್ತನೆಯಿಂದಲೇ ಜಾಸ್ತಿ ಹೆಸರು ಮಾಡುತ್ತಿರುವ ಕಾಂಗ್ರೆಸ್ ಸದಸ್ಯರು ಈ ಹಿಂದೆ ಬಿಜೆಪಿಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದರು‌. ಈಗ, ನಿಜವಾದ ‘ಪೋಕರಿ’ಗಳು ಯಾರು, ಅನಾಗರಿಕರು ಯಾರು, ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಾಬೀತು ಪಡಿಸಿದ್ದಾರೆ ಎಂದರು.

ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಘಟನೆಯ ಕುರಿತಂತೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ನಾಯಕರು ವಿಧಾನ ಸಭೆ, ವಿಧಾನ ಪರಿಷತ್​​​​​ನ ಹೊರಗೆ ಗೂಂಡಾಗಿರಿ ಮಾಡುತ್ತಿದ್ದರು. ಈಗ ಒಳಗೂ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next