ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ಸೋಂಕು ದೃಢವಾದ ಬಗ್ಗೆ ಸ್ವತಃ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಖಚಿತ ಪಡಿಸಿದ್ದು, ಯಾವುದೇ ರೋಗಲಕ್ಷಣಗಳಿಲ್ಲ ಎಂದಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಹಿಂದೆಯೂ ಒಮ್ಮೆ ಕೋವಿಡ್ ಸೋಂಕು ತಾಗಿತ್ತು. ಇದೀಗ ಎರಡನೇ ಬಾರಿ ಸೋಂಕು ದೃಢವಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕಾಡುತ್ತಿದೆ ಕೋವಿಡ್ ಸೋಂಕು; ಪೋಷಕರಲ್ಲಿ ಹೆಚ್ಚಿದ ಆತಂಕ
“ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಕಟೀಲ್ ಟ್ವೀಟ್ ಮಾಡಿದ್ದಾರೆ.