Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ವಿಜಯೇಂದ್ರ ಅವರನ್ನು ಯಡಿಯೂರಪ್ಪ ಮಗ ಎಂದು ಅಧ್ಯಕ್ಷರನ್ನಾಗಿ ಮಾಡಿಲ್ಲ. ಅವರ ಬದಲಾವಣೆಗೆ ಒತ್ತಾಯಿಸಿದರೆ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ಕೇಂದ್ರದ ನಾಯಕರಿಗೆ ಅಪಮಾನ ಮಾಡಿದಂತೆ. ಯತ್ನಾಳ್ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ವರಿಷ್ಠರು ನೇಮಕ ಮಾಡಿದ್ದರೆ ನಾವೆಲ್ಲರೂ ಒಪ್ಪಿಕೊಳ್ಳುತ್ತಿದ್ದೆವು. ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬೇಕು ಎಂದು ನಾವು ಸಹ ದಿಲ್ಲಿಗೆ ನಿಯೋಗ ಹೋಗುತ್ತೇವೆ ಎಂದರು.
ವಿಜಯೇಂದ್ರ ಜನಪ್ರಿಯತೆ, ಸಂಘಟನ ಸಾಮಥ್ಯ ನೋಡಿ ಸಹಿಸಿಕೊಳ್ಳಲು ಆಗದೇ ಇರುವವರು ಬದಲಾವಣೆಯ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಟ್ಟಾಗಿರಬೇಕು. ವಿನಾಕಾರಣ ಗೊಂದಲ ಉಂಟು ಮಾಡುವ ಹೇಳಿಕೆ ನೀಡಬಾರದು. ಚಿಕ್ಕೋಡಿ, ದಾವಣಗೆರೆ ಸೇರಿ ಎಲ್ಲ ಕ್ಷೇತ್ರಗಳಿಗೂ ಟಿಕೆಟ್ ನೀಡಿದ್ದು ಪಕ್ಷದ ವರಿಷ್ಠರು. ಸೋಲಲು ಸ್ವಯಂಕೃತ ಅಪರಾಧವೇ ಕಾರಣ ಎಂದರು. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು: ಸಿ.ಪಿ. ಯೋಗೇಶ್ವರ್
ಮಂಡ್ಯ: ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಆದರೆ, ನಾನು ಪಕ್ಷಾಂತರ ಮಾಡುವ ಯೋಚನೆ ಮಾಡಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದು, ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದರೆ ಕಾಂಗ್ರೆಸ್ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ.