Advertisement
ಬೀಳಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹೊಸ ಮುಖಗಳಿಗೆ ಆದ್ಯತೆ ನೀಡಿದೆ. ಇದರ ಫಲವಾಗಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಲಿದೆ. ಕಳೆದ 4 ವರ್ಷಗಳ ಅವಧಿಯಲ್ಲಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೊವಿಡ್ ಸಂಕಷ್ಟದ ಮಧ್ಯೆಯೂ ಉತ್ತಮ ಆಡಳಿತ ನೀಡಿದೆ, ನೀರಾವರಿ, ಕೃಷಿ, ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ನೇಕಾರರು, ಮೀನುಗಾರರು, ಕುಶಲಕರ್ಮಿಗಳು ಸೇರಿದಂತೆ ಎಲ್ಲ ಶ್ರಮಿಕ ವರ್ಗಗಳ ಏಳ್ಗೆಗೆ ಬಿಜೆಪಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಕಾರ್ಯಕರ್ತರು ಸರ್ಕಾರದ ಸಾಧನೆಗಳನ್ನು ಜನತೆಗೆ ಮುಟ್ಟಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸಿದರು.
Related Articles
Advertisement
ಜನರ ಆಶೋತ್ತರಗಳಿಗೆ ಸ್ಪಂದಿಸಿದ ನಿರಾಣಿ: ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆ ಮೂಲಕ 6 ಸಾವಿರ ಕೇಂದ್ರ ಸರ್ಕಾರ ನೀಡಿದರೆ ರಾಜ್ಯ ಸರ್ಕಾರ 4 ಸಾವಿರ ನೀಡುವ ಮೂಲಕ ವಾರ್ಷಿಕ 10 ಸಾವಿರ ನೀಡುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡುವ ಜೊತೆಗೆ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕೆ ಜೊತೆಯಾಗಿ ನಿಂತಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ವಿಧಾನಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.
ಗೋವಿನಕೊಪ್ಪ, ಕಲಾದಗಿ ಗ್ರಾಮದಲ್ಲಿ ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಮಾಡಿದ ಜನಸೇವೆಗೆ ಪ್ರತಿಫಲವಾಗಿ ಹೋದಲೆಲ್ಲ ನಮಗೆ ಅಭೂತಪೂರ್ವ ಬೆಂಬಲ ದೊರಕುತ್ತಿದೆ. ಜನತೆಯ ಆಶಯ-ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. 3 ಬಾರಿ ಆಶಿರ್ವಾದ ಮಾಡಿದ್ದಿರಿ. ಈ ಬಾರಿಯೂ ನಿಮ್ಮ ಬೆಂಬಲ ಆಶೀರ್ವಾದ ಇರಲಿ ಮತದಾರರಲ್ಲಿ ವಿನಂತಿಸಿಕೊಂಡರು. ಕಾಂಗ್ರೆಸ್ ಜಾತಿ-ಜಾತಿಗಳಲ್ಲಿ ಜಗಳ ಹಚ್ಚುವ ಮೂಲಕ ಒಡೆದು ಆಳುವ ನೀತಿ ಅನುಸರಿಸುತ್ತದೆ. ಬೀಳಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ದು ಈ ಬಾರಿ ಖೇಲ್ ಕತಂ ನಾಟಕ ಬಂದ್ ಆಗಲಿದೆ ಎಂದು ಅವರು ಹೇಳಿದರು. ವೆಂಕಟೇಶ ದಾಸನ್ನವರ, ವಿಠuಲ ಸೊನ್ನದ, ಶ್ರೀನಿವಾಸ ಪೂಜಾರ, ಸುರೇಶ ಮಾದರ, ಮಂಜುಗೌಡ ಪಿ. ಪಾಟೀಲ, ಶಿವಪುತ್ರಪ್ಪ ದಾಸನ್ನವರ, ಉದಂಡಪ್ಪ ತಪರೇಶ ಹಾಗೂ ಹಲವರು ಉಪಸ್ಥಿತರಿದ್ದರು.