ಬೆಂಗಳೂರು: ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮಾಡಿರುವ ಅಪಮಾನ ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯು ಗುರುವಾರ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ದಲಿತ ಸಮುದಾಯಕ್ಕೆ ಸೇರಿದರಾಜ್ಯಪಾಲರನ್ನು ಶಿಷ್ಟಾಚಾರ ಮರೆತು ಟೀಕಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬೆಳಗ್ಗೆ 11ಕ್ಕೆ ನಡೆಯುವ ಪ್ರತಿಭಟನೆ ಯಲ್ಲಿ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತಿತರರು ಭಾಗವಹಿಸುತ್ತಾರೆ.
ಕಾಂಗ್ರೆಸ್ ಪ್ರತಿಭಟನೆ ಸಂದರ್ಭ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ.
ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಮಾತನಾಡಿ¨ªಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಪ್ರತಿಭಟನೆಯ ರೂಪರೇಖೆ?
-ರಾಜ್ಯಪಾಲರ ನಿಂದನೆ ಖಂಡಿಸಿ, ಸಿಎಂ ರಾಜೀ ನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
-ಕಾಂಗ್ರೆಸ್ ನಾಯಕರು ಅವಾಚ್ಯ ಶಬ್ದಗಳಿಂದ ರಾಜ್ಯಪಾಲರ ನಿಂದಿಸಿದ್ದಕ್ಕೆ ಖಂಡನೆ
-ಜಮೀರ್ ಅಹ್ಮದ್, ಕೃಷ್ಣಬೈರೇಗೌಡ ಸೇರಿ ಪ್ರಮುಖರ ವಿರುದ್ಧ ಕೇಸು ದಾಖಲಿಸಲು ಆಗ್ರಹ
-ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಸಂಸದರು ಸೇರಿ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ