Advertisement
ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯಾಗಿಸಿದ ಸಿದ್ದರಾಮಯ್ಯ ಅವರಿಗೆ ಮದಕರಿ ನಾಯಕ ನೆನಪಾಗಲಿಲ್ಲವೇಕೇ ಎಂದು ಪ್ರಶ್ನಿಸಿದ ಶಾ, ನಾವು ಚಿತ್ರದುರ್ಗದಲ್ಲಿ ಮದಕರಿ ನಾಯಕನ ಭವ್ಯ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಅಲ್ಲದೆ ವಿವಿ ಸಾಗರ ಜಲಾಶಯಕ್ಕೆ 5 ಟಿಎಂಸಿ ನೀರು ಹರಿಸುತ್ತೇವೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ತಂದೆ ಎ. ಕೃಷ್ಣಪ್ಪ ಕೆಲವೇ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಅವರ ಆಸೆಯಂತೆ ಈ ಭಾಗದ ಜನರ ಸೇವೆ ಮಾಡಲು ನಾನು ಸ್ಪರ್ಧಿಸಿದ್ದೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಡಿ.ಟಿ. ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಳ್ಳಕೆರೆ ಕ್ಷೇತ್ರದ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ಹೊಸದುರ್ಗ ಕ್ಷೇತ್ರದ ಅಭ್ಯರ್ಥಿ ಗೂಳಿಹಟ್ಟಿ ಶೇಖರ್, ಹೊಳಲ್ಕೆರೆ ಕ್ಷೇತ್ರದ ಅಭ್ಯರ್ಥಿ ಎಂ. ಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್, ಮಾಜಿ ಶಾಸಕ ಆರ್. ರಾಮಯ್ಯ, ಮುಖಂಡರಾದ ಸಿದ್ದೇಶ್ ಯಾದವ್, ಮುರಳಿ, ಲಿಂಗಮೂರ್ತಿ, ಟಿ.ಜಿ. ನರೇಂದ್ರನಾಥ್, ದ್ಯಾಮೇಗೌಡ, ಯಶವಂತ್, ಟಿ. ಚಂದ್ರಶೇಖರ್, ಎಚ್.ಎನ್. ನರಸಿಂಹಯ್ಯ, ಕೇಶವಮೂರ್ತಿ ಉಪಸ್ಥಿತರಿದ್ದರು.