Advertisement

ಸಿಎಂ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿ ತಂತ್ರ

06:25 AM Apr 13, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿರುವುದರಿಂದ ಬಿಜೆಪಿ ಸಹ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿದೆ. ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಲ್ಲೇ ಹೆಚ್ಚು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿಯಿಂದಲೂ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. 

Advertisement

ಪಕ್ಷದಲ್ಲಿ ವರ್ಚಸ್ಸು ಹೊಂದಿರುವ ನಾಯಕರನ್ನೇ ಎರಡೂ ಕಡೆ ಅಭ್ಯರ್ಥಿಯಾಗಿಸಬೇಕೆಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸೂಚನೆ ನೀಡಿದ್ದು, ರಾಜ್ಯಾಧ್ಯಕ್ಷ ಬಿ.ಎಸ್‌ .ಯಡಿಯೂರಪ್ಪ ಹಾಗೂ ರಾಜ್ಯ ನಾಯಕರು ಸಮರ್ಥ ಅಭ್ಯರ್ಥಿಗಳ ತಲಾಷೆಯಲ್ಲಿದ್ದಾರೆಂದು ಹೇಳಲಾಗಿದೆ.

2013ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹೇಮಂತ್‌ಗೌಡ, ಬಾದಾಮಿಯಿಂದ ಎಂ.ಕೆ.ಪಟ್ಟಣಶೆಟ್ಟಿ ಸ್ಪರ್ಧಿಸಿದ್ದರು. ಈ ಬಾರಿಯೂ ಇವರೇ ಆಕಾಂಕ್ಷಿಗಳಾಗಿದ್ದರೂ ಸಿದ್ದರಾಮಯ್ಯ ಸ್ಪರ್ಧೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು, ಜೆಡಿಎಸ್‌ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಜಿ.ಟಿ.ದೇವೇಗೌಡರನ್ನು ಘೋಷಿಸಿದ್ದು, ಬಾದಾಮಿಗೆ ಹನುಮಂತಪ್ಪ ಮಾವಿನಮರದ ಹೆಸರು ಪ್ರಕಟಿಸಿದೆ. ಈ ಪೈಕಿ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರೇ ಸ್ಪರ್ಧೆಗೆ ಇಳಿಯುತ್ತಿರುವುದರಿಂದ ಈಗ ಘೋಷಿಸಿರುವ ಅಭ್ಯರ್ಥಿ ಬದಲಿಸಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next