Advertisement

ಪಂಜಾಬ್ ನೂತನ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ವಿರುದ್ಧ ಮೀಟೂ ಆರೋಪ

08:46 AM Sep 20, 2021 | Team Udayavani |

ಚಂಡೀಗಢ: ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚಮ್‌ಕೌರ್‌ ಸಾಹಿಬ್‌ ಕ್ಷೇತ್ರದ ಶಾಸಕ ಚರಣ್‌ಜಿತ್‌ ಸಿಂಗ್‌ ಚನ್ನಿ (51 ವ) ಆಯ್ಕೆಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿರುವ ಇವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಅಚ್ಚರಿಯ ರೀತಿಯಲ್ಲಿ ಆಯ್ಕೆ ಮಾಡಿದೆ.

Advertisement

ಹೀಗಾಗಿ, ಅವರು ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಸೋಮವಾರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸಿಎಂ ಆಯ್ಕೆ ಬೆನ್ನಲ್ಲೇ ಬಿಜೆಪಿ ಟೀಕಾ ಪ್ರಹಾರ ಆರಂಭಿಸಿದೆ. “ಕಾಂಗ್ರೆಸ್ ನ ಸಿಎಂ ಆಯ್ಕೆಯಾಗಿರುವ ಚರಣ್‌ಜಿತ್‌ ಚನ್ನಿ 3 ವರ್ಷದಿಂ ಮೀಟೂ ಪ್ರಕರಣ ಎದುರಿಸುತ್ತಿದ್ದಾರೆ. ಅವರು 2018 ರಲ್ಲಿ ಮಹಿಳಾ ಐಎಎಸ್ ಅಧಿಕಾರಿಗೆ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದರು. ಪಂಜಾಬ್ ಮಹಿಳಾ ಆಯೋಗವು ನೋಟಿಸ್ ಕಳುಹಿಸಿದೆ” ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಬಿಜೆಪಿ ನಾಯಕ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ.

ಮೂರು ವರ್ಷದ ಹಿಂದೆ ನಡೆದಿದ್ದ ಪ್ರಕರಣವು ಈ ವರ್ಷದ ಮೇ ತಿಂಗಳಲ್ಲಿ ಮತ್ತೆ ಮುನ್ನಲೆಗೆ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next