Advertisement
ಜೂ. 5ರಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರ ದಿಂದ ಮತ್ತೂಮ್ಮೆ ಬಿಜೆಪಿ ಅಭ್ಯರ್ಥಿಯಾಗಿರುವ ಕ್ಯಾ| ಗಣೇಶ್ ಕಾರ್ಣಿಕ್ ವಿಧಾನಪರಿಷತ್ ಸದಸ್ಯನಾಗಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಬಿಜೆಪಿ ಶಿಕ್ಷಕರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಡಾ| ವಿ.ಎಸ್. ಆಚಾರ್ಯ ಅವರ ಮುಂದಾಳತ್ವದಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಈಗಲೂ ಶಿಕ್ಷಕರಿಗೆ ಹಲವಾರು ಸಮಸ್ಯೆಗಳು ಎದುರಾಗಿವೆ. ಇವುಗಳಿಗೆ ಪರಿಹಾರ ಒದಗಿಸಿ ಕೊಡಬೇಕಾಗಿದೆ. ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಲು ಶಿಕ್ಷಕರ ಕೊಡುಗೆ ಕಾರಣ ಎಂದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಕರಿಗೆ ಈ ಹಿಂದೆ ನೀಡಲಾಗುತ್ತಿದ್ದ “ಸಾಧಕ ಶಿಕ್ಷಕ ಪ್ರಶಸ್ತಿ’ ಯನ್ನು ಮತ್ತೆ ಆರಂಭಿಸಲಾಗುವುದು. ಕಳೆದ ಐದು ವರ್ಷಗಳಿಂದ ಈ ಪ್ರಶಸ್ತಿಯನ್ನು ನಿಲ್ಲಿಸಲಾಗಿತ್ತು. ಎಸೆಸ್ಸೆಲ್ಸಿ ಮತ್ತು ಪಿಯುಸಿಯ ಪ್ರತಿ ವಿಷಯವಾರು ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಆಂಗ್ಲಮಾಧ್ಯಮ ವಿಭಾಗದಲ್ಲಿ ಪ್ರತ್ಯೇಕ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಶಾಸಕರು ತಿಳಿಸಿದರು. ಪಕ್ಷದ ಮುಖಂಡರಾದ ಯಶ್‌ಪಾಲ್ ಸುವರ್ಣ, ಪ್ರಭಾಕರ ಪೂಜಾರಿ, ರಾಘವೇಂದ್ರ ಕಿಣಿ, ಜಗದೀಶ್ ಆಚಾರ್ಯ, ಗಿರೀಶ್ ಅಂಚನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.