Advertisement

144 ಲೋಕಸಭಾ ಕ್ಷೇತ್ರಗಳಲ್ಲಿ ಬಲವರ್ಧನೆಗೆ ಬಿಜೆಪಿ ಚಿಂತನೆ

09:43 PM Sep 06, 2022 | Team Udayavani |

ನವದೆಹಲಿ: ದುರ್ಬಲವಾಗಿರುವ 144 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಬಿಜೆಪಿ ನಿರ್ಧರಿಸಿದೆ. 2024 ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನಕ್ಕೆ ಬರಲಾಗಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವರ ಸಭೆಯಲ್ಲಿ ಈ ಬಗ್ಗೆ ಪರಾಮರ್ಶೆ ನಡೆಸಲಾಗಿದೆ.

Advertisement

ಪಶ್ಚಿಮ ಬಂಗಾಳ, ತೆಲಂಗಾಣ, ಮಹಾರಾಷ್ಟ್ರ, ಪಂಜಾಬ್‌, ಉತ್ತರ ಪ್ರದೇಶ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿನ ಕ್ಷೇತ್ರಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗಿದೆ. ಜತೆಗೆ ಕೇಂದ್ರ ಸಚಿವರಿಗೆ ಈ ಕ್ಷೇತ್ರಗಳಲ್ಲಿ ಪಕ್ಷ ಬಲವರ್ಧನೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವರದಿಯನ್ನೂ ಸಲ್ಲಿಸಿದ್ದಾರೆ.

ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್‌, ಗಿರಿರಾಜ್‌ ಸಿಂಗ್‌, ಸ್ಮತಿ ಇರಾನಿ, ಪುರುಷೋತ್ತಮ್‌ ರೂಪಾಲ, ಗಜೇಂದ್ರ ಸಿಂಗ್‌ ಸೇರಿದಂತೆ 25ಕ್ಕೂ ಹೆಚ್ಚು ಕೇಂದ್ರ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

ಬೂತ್‌ ಮಟ್ಟದಲ್ಲಿ ಪಕ್ಷದ ಸಂಘಟನೆ, ಕೇಂದ್ರ ಸರ್ಕಾರದ ಹಲವು ಯೋಜನೆಗಳ ಫ‌ಲಾನುಭವಿಗಳ ಮೂಲಕ ವಿವಿಧ ಸಮುದಾಯದ ಜನರನ್ನು ತಲುಪುವುದು, ಪಕ್ಷ ದುರ್ಬಲವಾಗಿರುವ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಸಚಿವರು ಭೇಟಿ ನೀಡಿ, ಅವರು ಅಲ್ಲಿನ ರಾಜಕೀಯ ಸ್ಥಿತಿ ಸೇರಿದಂತೆ ಪಕ್ಷದ ನಾಯಕರು ನೀಡಿರುವ ವಿವಿಧ ಸಲಹೆಗಳ ಅನುಷ್ಠಾನದ ಕುರಿತ ಪ್ರಗತಿಯನ್ನು ಪರಿಶೀಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next