Advertisement

ಬಿಜೆಪಿ ಚಿಂತೆಗೆ ಕಾರಣವಾದ ಸಿದ್ದರಾಮೋತ್ಸವ: ಇದೇ ತಿಂಗಳಲ್ಲಿ ಕಮಲ ಪಕ್ಷದಿಂದ ಬೃಹತ್ ಸಮಾವೇಶ?

01:39 PM Aug 05, 2022 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮ ದಿನೋತ್ಸವ ಭರ್ಜರಿ ಯಶಸ್ವಿಯಾಗಿರುವುದು ಬಿಜೆಪಿಯ ಚಿಂತೆಗೆ ಕಾರಣವಾಗಿದ್ದು, ಪರ್ಯಾಯವಾಗಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದೆ.

Advertisement

ಹುಬ್ಬಳ್ಳಿ, ಮಂಗಳೂರು ಅಥವಾ ಮೈಸೂರು ಕರ್ನಾಟಕ ಭಾಗದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ಬಿಜೆಪಿ ಚಿಂತನೆ ನಡೆಸುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಮಾವೇಶ ನಡೆಸಲು ಒಪ್ಪಿಗೆ ಸೂಚಿಸಿದ್ದು, ಕಾರ್ಯಕರ್ತರಲ್ಲಿ ಹೊಸ  ಹುರುಪು ಮೂಡಿಸಲು ಸಮಾವೇಶದ ಅಗತ್ಯತೆಯನ್ನು ಪಕ್ಷದ ಮುಖಂಡರು ಮನವರಿಕೆ ಮಾಡಿಕೊಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆಯಾದ ನಂತರ ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿ ಬಿದ್ದು ರಾಜೀನಾಮೆ ನೀಡುತ್ತಿದ್ದಾರೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಅಸಮಾಧಾನಗೊಂಡಿರುವ ಕಾರ್ಯಕರ್ತರನ್ನು ಸಮಾಧಾನಪಡಿಸಿ ವಿಶ್ವಾಸ ಗಳಿಸಲು ಸದ್ಯದಲ್ಲೇ ಸಮಾವೇಶ ನಡೆಸಬೇಕೆಂಬ ಒತ್ತಡವೂ ಪಕ್ಷದ ಪ್ರಮುಖರಿಂದಲೇ ಕೇಳಿಬಂದಿದೆ.

Advertisement

ಇದನ್ನೂ ಓದಿ:ನ.1ರಂದು ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:ಸಿಎಂ ಬೊಮ್ಮಾಯಿ

ಹೀಗಾಗಿ ಈ ತಿಂಗಳ ಅಂತ್ಯಕ್ಕೆ ಪ್ರಮುಖ ಸ್ಥಳವೊಂದರಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಈ ಸಮಾವೇಶಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವ ಬಗ್ಗೆ ಚರ್ಚೆ ನಡೆದಿದೆ.

ದಾವಣಗೆರೆಯಲ್ಲಿ ಕಾರ್ಯಕ್ರಮ?: ಬಿಜೆಪಿ ಜನಪರ ಕಾರ್ಯಕ್ರಮಗಳ ಬಗ್ಗೆ ರಾಜ್ಯಾದ್ಯಂತ ಕಾರ್ಯಕ್ರಮ ಮಾಡಲಿದೆ. ಆ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ದಾವಣಗೆರೆಯಲ್ಲಿ ಮಾಡಲು ಸಿಎಂ ಗೆ ವಿನಂತಿ ಮಾಡುತ್ತೇನೆ ಎಂದು ರೇಣುಕಾಚಾರ್ಯ ಹೇಳಿರುವುದು ಕೂಡಾ ಗಮನಾರ್ಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next