Advertisement

BJP ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ| ಟಿ.ಜಿ. ರವಿಕುಮಾರ್ ಕಾಂಗ್ರೆಸ್ ಸೇರ್ಪಡೆ

09:58 PM Apr 12, 2024 | Team Udayavani |

ದಾವಣಗೆರೆ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ. ಗುರುಸಿದ್ದನ ಗೌಡ ಮತ್ತು ಅವರ ಪುತ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ| ಟಿ.ಜಿ. ರವಿಕುಮಾರ್ ಶುಕ್ರವಾರ ಸಂಜೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

Advertisement

ದಾವಣಗೆರೆಯ ಆರೈಕೆ ಆಸ್ಪತ್ರೆಯ ಮುಖ್ಯಸ್ಥರಾಗಿರುವ ಡಾ| ರವಿಕುಮಾರ್ ಬಿಜೆಪಿ ಟಿಕೆಟ್‌ಗೆ ಭಾರೀ ಪ್ರಯತ್ನ ನಡೆಸಿದ್ದರು. ಮಾಜಿ ಸಚಿವರು, ಮಾಜಿ ಶಾಸಕರು ಇತರರು ಸಹ ಡಾ| ರವಿಕುಮಾರ್ ಅವರಿಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಹಾಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯಿತ್ರಿ ಸಿದ್ದೇಶ್ವರ್ ಅವರಿಗೆ ಟಿಕೆಟ್ ಘೋಷಣೆ ನಂತರವೂ ಪ್ರಯತ್ನ ಮುಂದುವರಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ರಾಜೇಶ್ ಇತರರು ದಾವಣಗೆರೆ ಹೊರ ವಲಯದ ಅಪೂರ್ವ ರೆಸಾರ್ಟ್‌ನಲ್ಲಿ ಸುದೀರ್ಘ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಿದ್ದರು. ಅಂದಿನ ಸಭೆಯಲ್ಲಿ ಟಿ. ಗುರುಸಿದ್ದನಗೌಡ, ಡಾ| ರವಿಕುಮಾರ್ ಭಾಗವಹಿಸಿದ್ದರು. ಆ ನಂತರದ ಬೆಳವಣಿಗೆಯಲ್ಲಿ ಕೊನೆಗೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next