Advertisement

ಶಿಗ್ಗಾವಿಯಲ್ಲಿ ಸ್ಥಳೀಯರಿಗೆ ಬಿಜೆಪಿ ಟಿಕೆಟ್‌ ನೀಡಿ 

06:55 AM Mar 30, 2018 | Team Udayavani |

ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಥಳೀಯರಿಗೇ ಟಿಕೆಟ್‌ ನೀಡಬೇಕು. ಇಲ್ಲದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲಾಗುವುದು. ಇದರಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸೋಮಣ್ಣ ಬೇವಿನಮರದ ಸೇರಿ ನಾಲ್ವರು ಮುಖಂಡರು ಒತ್ತಾಯಿಸಿದ್ದಾರೆ.

Advertisement

ಮಾಜಿ ಶಾಸಕ ರಾಜಶೇಖರ ಸಿಂಧೂರ, ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಶಶಿಧರ ಎಲಿಗಾರ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು,ನಾಲ್ವರಲ್ಲಿ ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ಒಗ್ಗಟ್ಟಾಗಿ ಅವರ ಗೆಲುವಿಗೆ ಶ್ರಮಿಸುತ್ತೇವೆ. ಒಂದು ವೇಳೆ ಬಸವರಾಜ ಬೊಮ್ಮಾಯಿ ಅವರಿಗೇ ಟಿಕೆಟ್‌ ಕೊಟ್ಟರೆ ಪಕ್ಷೇತರವಾಗಿ ಸ್ಪರ್ಧಿಸುತ್ತೇವೆ, ಈ ವಿಚಾರದಲ್ಲಿ ರಾಜಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next