ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಬೇಲೂರು ರಸ್ತೆಯಲ್ಲಿ ಕೇಂದ್ರ ಪ್ರಾಯೋಜಿತ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಹಾಗೂ ಅನುಷ್ಠಾನದ ಮೂಲಕ ಫಲಾನುಭಗಳಿಗೆ ಸೌಲಭ್ಯ ಕಲ್ಪಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸುಲಲಿತ ಆಡಳಿತ ಇಂದಿಗೆ 8 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಹಲವಾರು ರೈತರು, ಕಾರ್ಮಿಕರು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಆಯುಷ್ಮಾನ್ ಭಾರತ ಮೂಲಕ ಎಲ್ಲಾ ವರ್ಗದ ಜನರ ಆರೋಗ್ಯ ಕಾಳಜಿ ವಹಿಸಿದ್ದಾರೆ ಎಂದರು.
ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್‌ರಾಜ್ ಅರಸ್ ಮಾತನಾಡಿ, ದೇಶದಲ್ಲಿ ನುಡಿದಂತೆ ನಡೆಯುವ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ. 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಕಾರ್ಯಕ್ರಮಗಳನ್ನು ಅವಧಿಗೂ ಮುನ್ನವೇ ಸಮರ್ಪಕವಾಗಿ ದೇಶಾದ್ಯಂತ ಅನುಷ್ಠಾನಗೊಳಿಸಲಾಗಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 8 ವರ್ಷಗಳನ್ನು ಪೂರೈಸಿದೆ. ಆ ನಿಟ್ಟಿನಲ್ಲಿ ಕೇಂದ್ರದ ಕಾರ್ಯಕ್ರಮಗಳನ್ನು ಜನತೆಗೆ ಮತ್ತಷ್ಟು ಹತ್ತಿರವಾಗಿಸುವ ನಿಟ್ಟಿನಲ್ಲಿ ಯುವಮೋರ್ಚಾದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದರು.
ಯುವಮೋರ್ಚಾದ ಜಿಲ್ಲಾಧ್ಯಕ್ಷ ಸಂದೀಪ್ ಮಾತನಾಡಿ, ಕೇಂದ್ರ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಕೂಡ ಒಂದಾಗಿದೆ. 2018ರಲ್ಲಿ ಅನುಷ್ಠಾನಗೊಂಡ ಕಾರ್ಯಕ್ರಮ ಇಂದು ಸುಮಾರು 50 ಕೋಟಿಗೂ ಹೆಚ್ಚು ಜನರು ಇದರ ಸದುಪಯೋಗಪ ಡೆದುಕೊಳ್ಳುತ್ತಿದ್ದಾರೆ ಎಂದರು.
ನಗರ ಮಂಡಲ ಯುವ ಮೋರ್ಚಾದ ಅಧ್ಯಕ್ಷ ರಾಜೇಶ್, ನಗರಸಭೆ ಸದಸ್ಯ ಮಣಿಕಂಠ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಚಿನ್ ಗೌಡ, ಕಾರ್ಯದರ್ಶಿ ಕೌಶಿಕ್, ಜೀವನ್ ಇತರರು ಇದ್ದರು