Advertisement

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

09:04 PM Oct 18, 2024 | Team Udayavani |

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಎನ್ ಡಿಎ ಮೈತ್ರಿಕೂಟ ಶುಕ್ರವಾರ(ಅ18)ರಂದು ಸೀಟು ಹಂಚಿಕೆ ಅಂತಿಮಗೊಳಿಸಿದ್ದು,ಒಟ್ಟು 81 ಸ್ಥಾನಗಳ ಪೈಕಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.ಮಿತ್ರ ಪಕ್ಷಗಳಾದ ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ (AJSU), ಜನತಾ ದಳ-ಯುನೈಟೆಡ್ (JDU) ಮತ್ತು ಲೋಕ ಜನಶಕ್ತಿ ಪಕ್ಷ (ರಾಮವಿಲಾಸ್) ಜತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

Advertisement

ರಾಂಚಿಯ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ಎಜೆಎಸ್‌ಯು ಪಕ್ಷದೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸೀಟು ಹಂಚಿಕೆಯನ್ನು ಪ್ರಕಟಿಸಿದ ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ-ಪ್ರಭಾರಿ ಹಿಮಂತ ಬಿಸ್ವಾ ಶರ್ಮ, “ಎಜೆಎಸ್‌ಯು 10 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ನಾವು ಒಮ್ಮತಕ್ಕೆ ಬಂದಿದ್ದೇವೆ. ಜೆಡಿಯು ಎರಡು ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ಉಳಿದ ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಮತ್ತು ಜಾರ್ಖಂಡ್ ಬಿಜೆಪಿ ನಾಯಕ ಬಾಬುಲಾಲ್ ಮರಾಂಡಿ ಅವರಲ್ಲದೆ ಎಜೆಎಸ್‌ಯು ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ಇತರ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು ನವೆಂಬರ್ 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next