ಬೆಂಗಳೂರು: ಬಿಜೆಪಿ ಅಭಿವೃದ್ಧಿಯ ಆಧಾರದಲ್ಲಿ ಧನಾತ್ಮಕ ಕಾರ್ಯಸೂಚಿಯೊಂದಿಗೆ ಚುನಾವಣೆಗೆ ಹೋಗುವ ಆಶಯ ಹೊಂದಿದೆ ಎಂದು ರಾಜ್ಯ ಚುನಾವಣ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಂಜೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಮೂಲಸೌಕರ್ಯದ ಅಭಿವೃದ್ಧಿ, ಸಂಪರ್ಕ ಕ್ಷೇತ್ರದ ಗಮನಾರ್ಹ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪೂರಕ. ಜನರ ಕಷ್ಟಗಳನ್ನು ಬಗೆಹರಿಸುವಲ್ಲಿ ನರೇಂದ್ರ ಮೋದಿ ದೊಡ್ಡ ಹೆಜ್ಜೆ ಇಟ್ಟರು. ಗಾಂಧೀಜಿ ಹೇಳಿದಂತೆ ಸ್ವತ್ಛತೆಗೆ ಆದ್ಯತೆ ಕೊಡಲಾಗಿದೆ ಎಂದರು.
ಶೌಚಾಲಯ ನಿರ್ಮಾಣಕ್ಕೆ ಎಸ್.ಸಿ/ಎಸ್.ಟಿ ಸಮುದಾಯಗಳಿಗೆ 15 ಸಾವಿರ, ಹಿಂದುಳಿದ ವರ್ಗಗಳ ಮನೆಗಳಿಗೆ 12 ಸಾವಿರ ಕೊಡಲಾಯಿತು. 11 ಕೋಟಿಗೂ ಹೆಚ್ಚು ಶೌಚಾಲಯಗಳ ನಿರ್ಮಾಣ ಮತ್ತು ಹೊಸದಾಗಿ ಯಾವುದೇ ಮನೆ ನಿರ್ಮಾಣ ಮಾಡಿದರು ಶೌಚಾಲಯ ಕಡ್ಡಾಯ ಎಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದರು.
ಈಗ ಗ್ಯಾಸ್ ಇಲ್ಲದ ಮನೆಗೆ ಗ್ಯಾಸ್ ಸಂಪರ್ಕ ನೀಡಲಾಗಿದೆ. ವಿಧವಾ ವೇತನವನ್ನು ಬಿ. ಎಸ್. ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ 200 ರೂ. ರಿಂದ 500 ರೂ ಹೆಚ್ಚಳ ಮಾಡಿದ್ದರು. ಈಗ 1000 ರೂ ನೀಡಲಾಗುತ್ತಿದೆ. ವೃದ್ಧರಿಗೆ ಸಂಧ್ಯಾ ಸುರûಾ ಯೋಜನೆ ಜಾರಿ ಮಾಡಿದ್ದೇವೆ. ಮನೆಯ ವೃದ್ಧ ವೃದ್ಧೆಗೆ ಒಟ್ಟು 2,400 ರೂ ಕೊಡಲಾಗುತ್ತಿದೆ ಎಂದು ವಿವರಿಸಿದರು.