Advertisement

ಇಂದು ನಾಳೆ ಹೈದರಾಬಾದ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

10:48 PM Jun 01, 2022 | Team Udayavani |

ಹೈದರಾಬಾದ್‌: ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ತೆಲಂಗಾಣದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಪಕ್ಷದ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

Advertisement

ತೆಲಂಗಾಣದ ಆಡಳಿತದಲ್ಲಿರುವ ಕೆ.ಚಂದ್ರಶೇಖರ್‌ ರಾವ್‌ ಅವರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌)ನ್ನು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಣಿಸಲು ಬಿಜೆಪಿ ಸಕಲ ತಯಾರಿ ನಡೆಸಿಕೊಳ್ಳುತ್ತಿದ್ದು, ಅದಕ್ಕೆ ಶ್ರೀಕಾರ ಹಾಕಲೆಂದೇ ತೆಲಂಗಾಣದಲ್ಲಿ ಕಾರ್ಯಕಾರಿಣಿ ಇಟ್ಟುಕೊಂಡಿರುವುದಾಗಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next