Advertisement

ರಫೇಲ್ ಖರೀದಿ ಬಗ್ಗೆ ಸುಳ್ಳು ಆರೋಪ; ರಾಹುಲ್ ವಿರುದ್ಧ ಶನಿವಾರ ದೇಶಾದ್ಯಂತ ಬಿಜೆಪಿ ಪ್ರತಿಭಟನೆ

09:49 AM Nov 16, 2019 | Team Udayavani |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿದ ನಂತರ ಈ ವಿಚಾರದಲ್ಲಿ ಸುಳ್ಳು ಆರೋಪ ಹೊರಿಸಿದ್ದ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ವಿರುದ್ಧ ಶನಿವಾರ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಭಾರತೀಯ ಜನತಾ ಪಕ್ಷ ತಿಳಿಸಿದೆ.

Advertisement

ಎಎನ್ ಐ ವರದಿ ಪ್ರಕಾರ, ರಫೇಲ್ ವಿಚಾರದಲ್ಲಿ ದೇಶದ ಜನರ ದಿಕ್ಕುತಪ್ಪಿಸಲು ಯತ್ನಿಸಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ನಾಳೆ ದೆಹಲಿಯ ಕಾಂಗ್ರೆಸ್ ಪಕ್ಷದ ಕಚೇರಿಯ ಹೊರಭಾಗದಲ್ಲಿ ಹಾಗೂ ದೇಶದ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಅಸ್ತ್ರವಾಗಿಸಿಕೊಳ್ಳಲು ಪ್ರಯತ್ನಿಸಿದ್ದ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮತ್ತೊಮ್ಮೆ ಕ್ಲೀನ್ ಚಿಟ್ ನೀಡಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು.

ಅಲ್ಲದೇ ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಹೆಸರು ಬಳಸಿ ಮೋದಿ ವಿರುದ್ಧ ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಇನ್ಮುಂದೆ ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಎಚ್ಚರಿಕೆ ಇರಲಿ ಎಂದು ತಾಕೀತು ಮಾಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next