Advertisement

ಬಿಜೆಪಿ ಮಹಿಳಾ ಮೋರ್ಚಾದಿಂದ ಕೋಟಿ ಸೆಲ್ಫಿ

12:59 AM Feb 27, 2023 | Team Udayavani |

ಹೊಸದಿಲ್ಲಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಿದ್ಧತೆ ಆರಂಭಿಸಿದೆ. ಅದರ ಅಂಗವಾಗಿ ಬಿಜೆಪಿಯ ರಾಷ್ಟ್ರೀಯ ಮಹಿಳಾ ಮೋರ್ಚಾ ಬೃಹತ್‌ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ.

Advertisement

ಇನ್ನೊಂದು ವರ್ಷದೊಳಗೆ ಕೇಂದ್ರ ಸರಕಾರದ ಯೋಜನೆಗಳ ಲಾಭ ಪಡೆದ ಮಹಿಳೆಯರನ್ನು ಅದು ಸಂಪರ್ಕಿಸಲಿದೆ. ಇಂತಹ 1 ಕೋಟಿ ಫ‌ಲಾನುಭವಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಮಾರ್ಚ್‌ ತಿಂಗಳಲ್ಲಿ ಬಿಜೆಪಿಯ ದಿವಂಗತ ನಾಯಕಿ ಸುಷ್ಮಾ ಸ್ವರಾಜ್‌ ಗೌರವಾರ್ಥ ಸಮಾವೇಶವನ್ನು ಹಮ್ಮಿಕೊಳ್ಳಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ತಲಾ 10 ಮಹಿಳೆಯರನ್ನು ಪ್ರತೀ ಜಿಲ್ಲೆಯಿಂದ ಆಯ್ಕೆ ಮಾಡಿ ಸಮಾವೇಶದಲ್ಲಿ ಸಮ್ಮಾನಿಸಲಾಗುತ್ತದೆ ಎಂದು ಮಹಿಳಾ ಮೋರ್ಚಾ ಮುಖ್ಯಸ್ಥೆ ವನಥಿ ಶ್ರೀನಿವಾಸನ್‌ ಹೇಳಿದ್ದಾರೆ.

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಯೋಜನೆ ಕೂಡ ಮಹಿಳೆಯರನ್ನು ತಲುಪುವ ಯತ್ನ, ಪ್ರತೀ ಜಿಲ್ಲೆಗೂ ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ತೆರಳಿ ಕೇಂದ್ರದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡುತ್ತಾರೆ. ಅನಂತರ ಯಾರು ಈ ಯೋಜನೆಗಳಿಂದ ಅನುಕೂಲ ಪಡೆದಿದ್ದಾರೋ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಈ ಇಡೀ ಪ್ರಕ್ರಿಯೆಯು ನಮೋ ಆ್ಯಪ್‌ ಮೂಲಕ ನಡೆಯಲಿದೆ ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next