Advertisement

ಜ. 21ರಿಂದ 29ರ ವರೆಗೆ ಮತ್ತೆ ಬಿಜೆಪಿ ವಿಜಯ ಸಂಕಲ್ಪಯಾತ್ರೆ

10:50 PM Jan 14, 2023 | Team Udayavani |

ಬೆಂಗಳೂರು: ಸಂಘಟನಾತ್ಮಕ ದೃಷ್ಟಿಯಿಂದ ಮತ್ತೆ ವಿಜಯ ಸಂಕಲ್ಪ ಯಾತ್ರೆ ಮುಂದುವರಿಸುವುದಕ್ಕೆ ರಾಜ್ಯ ಬಿಜೆಪಿ ನಿರ್ಧರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ರಾಷ್ಟ್ರೀಯ ನಾಯಕರನ್ನು ಒಳಗೊಂಡು ಈ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.

Advertisement

ಜ. 21ರಿಂದ 29ರ ವರೆಗೆ ಮತ್ತೆ ವಿಜಯ ಸಂಕಲ್ಪ ಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ. ಜನವರಿ 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಲಬುರಗಿಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಈ ಅಭಿಯಾನದಲ್ಲಿ ಜೋಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.
ಜನವರಿ 29ರಂದು ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ.

ಜನವರಿ 19ರಂದು ಕಲಬುರಗಿ ಯಲ್ಲಿ ನಡೆಯುವ ಹಟ್ಟಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಪ್ರಧಾನಿ ಬರಲಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇನ್ನು ಎರಡು ಬಾರಿ ಇದೇ ತಿಂಗಳು ರಾಜ್ಯಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಜನಸಂಕಲ್ಪ ಯಾತ್ರೆ
ಇದರ ಜತೆಗೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಅರ್ಧಕ್ಕೆ ನಿಂತ ಜನಸಂಕಲ್ಪ ಯಾತ್ರೆಗೆ ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. 90 ಕ್ಷೇತ್ರಗಳಲ್ಲಿ ಮಾತ್ರ ಈ ಯಾತ್ರೆ ನಡೆದಿದೆ. 150 ಕ್ಷೇತ್ರಗಳಿಗೆ ಪ್ರವಾಸ ನಡೆಸುವ ಗುರಿಯನ್ನು ಹೊಂದಲಾಗಿತ್ತು.

ಹೀಗಾಗಿ ಉಳಿದ ಕಡೆ ಯಾತ್ರೆ ಮುಂದುವರಿಯುತ್ತದೆ. ಇದಕ್ಕಾಗಿ 8ರಿಂದ 10 ತಂಡಗಳನ್ನು ರಚನೆ ಮಾಡಲಾಗುತ್ತದೆ.
ಮಾರ್ಚ್‌ ಆರಂಭದವರೆಗೆ ಸರಕಾರಕ್ಕೆ ಸಂಬಂಧಪಟ್ಟ ಎಲ್ಲ ಬಗೆಯ ಯೋಜನೆ ಅನುಷ್ಠಾನ ಪೂರ್ಣ ಗೊಳಿಸುವುದಕ್ಕೆ ಗುರಿ ನೀಡ ಲಾಗಿದ್ದು, ಮಾರ್ಚ್‌ ಅಂತ್ಯದ ವರೆಗೂ ಸಂಘಟನಾತ್ಮಕ ಚಟುವಟಿಕೆ ಮುಂದು ವರಿಸಲು ನಿರ್ಧರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next