ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರ ಒಲವಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಜನಸಂಕಲ್ಪ ಸಮಾವೇಶ, ಎಸ್ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ಜನರ ಒಲವು ನಮಗಿರುವುದಕ್ಕೆ ಸಾಕ್ಷಿ ಎಂದರು.
ನಾನು ಮತ್ತು ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಪಾಲ್ಗೊಂಡ ಸಂಕಲ್ಪ ಯಾತ್ರೆಯಲ್ಲೂ ಕಾರ್ಯಕರ್ತರ ಪಾಲ್ಗೊಳ್ಳುವಿಕೆ ಗರಿಷ್ಠ ಪ್ರಮಾಣದಲ್ಲಿದೆ. ಇವೆಲ್ಲವನ್ನೂ ಗಮನಿಸಿದರೆ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಇರುವುದು ಸ್ಪಷ್ಟ ಎಂದರು.
ಬಿಜೆಪಿಗೆ ರೌಡಿಗಳನ್ನು ಸೇರಿಸಿಕೊಂಡಿಲ್ಲ. ಕಾಂಗ್ರೆಸ್ನವರಿಗೆ ಯಾವುದೇ ಅಜೆಂಡಾ ಇಲ್ಲದ ಕಾರಣ ಆರೋಪಿಸುತ್ತಿದ್ದಾರೆ ಎಂದು ಹೇಳಿದರು.