Advertisement
ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ 150ಕ್ಕಿಂತ ಅಧಿಕ ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಘರ್ಷದ ಕಾರಣಕ್ಕೆ ಪಕ್ಷದ ಕಾರ್ಯಕರ್ತರು ಭಯಭೀತರಾಗುವ ಆವಶ್ಯಕತೆಯಿಲ್ಲ. ಅವರ ಜತೆ ನಾವಿದ್ದೇವೆ ಅನ್ನುವುದಕ್ಕಾಗಿಯೇ ನಾನು ಎರಡು ದಿನಗಳ ಕಾಲ ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ಸುತ್ತಾಡುತ್ತಿದ್ದೇನೆ. ಸಚಿವ ರಮಾನಾಥ ರೈ ಅವರಿಂದಾಗಿ ಜಿಲ್ಲೆಯಲ್ಲಿ ಅದರಲ್ಲೂ ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಅನ್ಯಾಯಕ್ಕೊಳಗಾಗುತ್ತಿದ್ದರು ಎಂದು ಸದಾನಂದ ಗೌಡ ಆರೋಪಿಸಿದರು.
Related Articles
Advertisement
ಹುಲಿಯನ್ನು ಕಾಡಿಗೆ ಕಳುಹಿಸಿಕೊಡಿ ನಳಿನ್ ಅವರು ಸಚಿವ ರಮಾನಾಥ ರೈ ಅವರನ್ನು ಉದ್ದೇಶಿಸಿ, ಮಾತನಾಡಿ ರೈ ಅವರು ಹುಲಿಯಂತೆ. ಈ ಹುಲಿಗೆ ವಯಸ್ಸಾಗಿದೆ. ಅದನ್ನು ಕಾಡಿಗೆ ಕಳುಹಿಸಿಕೊಡಿ. ಬಿಜೆಪಿ ಆಡಳಿತದಲ್ಲಿ ಜಿಲ್ಲೆಯಲ್ಲಿ ಕೋಮು ಗಲಭೆಗಲಾಗಿಲ್ಲ. ರೈ ಅವರು ಸಚಿವರಾಗಿದ್ದಾಗ ಮಾತ್ರ ಕೋಮುಸಂಘರ್ಷಗಳಾಗಿವೆ ಎಂದು ಆರೋಪಿಸಿದರು. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಉದಯ ಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಮುಖಂಡ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಜಿಲ್ಲೆ ಬಿಜೆಪಿ ವಕ್ತಾರ ಜಿತೇಂದ್ರ ಎಸ್.ಕೊಟ್ಟಾರಿ, ತಾ.ಪಂ.ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು, ಜಿಲ್ಲಾ ಬಿಜೆಪಿ ಪ.ಜಾ./ಪ.ಪಂ.ಮೋರ್ಚಾ ಅಧ್ಯಕ್ಷ ದಿನೇಶ್ ಅಮೂrರು, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ಮಹಮ್ಮದ್ ಮುಸ್ತಫಾ, ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕೊಳ್ನಾಡು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು. ಇತ್ತೀಚೆಗೆ ಹತ್ಯೆಗೊಳಗಾದ ಶರತ್ ಮಡಿವಾಳ ಅವರಿಗೆ ಸಭೆಯಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಿವೃತ್ತ ಸೈನಿಕರಿಗೆ ಹಾಗೂ ಗ್ರಾ.ಪಂ. ಅಧ್ಯಕ್ಷರುಗಳನ್ನು ಗೌರವಿಸಲಾಯಿತು. ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವದಾಸ ಶೆಟ್ಟಿ ಬಂಟ್ವಾಳ ಸ್ವಾಗತಿಸಿ, ಕೊಳ್ನಾಡು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ ಕಾರ್ಯಕ್ರಮ ನಿರ್ವಹಿಸಿದರು. ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ಮೋನಪ್ಪ ದೇವಸ್ಯ ವಂದಿಸಿದರು. ರಮಾನಾಥ ರೈ ಬಂಟ್ವಾಳ ಬಿಟ್ಟು ಕದಲಲಿಲ್ಲ
ಸಚಿವ ರೈ ಅವರು ಆರೇಳು ಬಾರಿ ಬಂಟ್ವಾಳದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಒಂದು ಬಾರಿ ಬಿಜೆಪಿ ಅಭ್ಯರ್ಥಿ ನಾಗರಾಜ ಶೆಟ್ಟಿ ಎದುರು ಸೋತಿದ್ದಾರೆ. ಇದೀಗ ಅವರು ಡಿವಿ ಮತ್ತು ಶೋಭಾ ಅವರಿಗೆ ಸವಾಲು ಹಾಕಿದ್ದಾರೆ. ಡಿವಿಯವರು ಪುತ್ತೂರಿನಲ್ಲಿ 2 ಬಾರಿ, ಉಡುಪಿ, ಬೆಂಗಳೂರಿನಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಮುಖ್ಯಮಂತ್ರಿಯೂ ಆಗಿದ್ದಾರೆ. ರೈ ಮಾತ್ರ ಬಂಟ್ವಾಳ ಬಿಟ್ಟು ಕದಲಲಿಲ್ಲ. ಅವರು ಬಂಟ್ವಾಳ ಬಿಟ್ಟು ಬೇರೆಲ್ಲಿ ಚುನಾವಣೆಗೆ ನಿಂತು ಗೆದ್ದಿದ್ದಾರೆ? ಅವರು ಮೂಡುಬಿದಿರೆಯಲ್ಲಿ ನಿಲ್ಲಲಿ, ನಮ್ಮ ಕಾರ್ಯಕರ್ತರನ್ನು ನಿಲ್ಲಿಸಿ ಅವರನ್ನು ಸೋಲಿಸುತ್ತೇವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.