Advertisement

ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ: ಸಿಎಂ ಬೊಮ್ಮಾಯಿ ವಿಶ್ವಾಸ

01:01 PM Mar 08, 2022 | Team Udayavani |

ಬೆಂಗಳೂರು: ಮತದಾನೋತ್ತರ ಸಮೀಕ್ಷೆಯಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಅವರು ಇಂದು ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

ಉತ್ತರ ಪ್ರದೇಶ, ಉತ್ತರಾಖಂಡ , ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸುವುದು ಚುನಾವಣೆ ಸಂದರ್ಭದಲ್ಲಿಯೇ ತಿಳಿದಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಎಕ್ಸಿಟ್ ಪೋಲ್ ಹೇಳಿದೆ. ಇನ್ನೆರಡು ದಿನ ಕಾದು ನೋಡೋಣ ಎಂದರು.

ಇದನ್ನೂ ಓದಿ:ಪಡುಕರೆ ಕಾಂಡ್ಲಾವನ : ಕಯಾಕಿಂಗ್‌ ಸಾಹಸ ಕ್ರೀಡೆಯಲ್ಲಿ ಉಡುಪಿ ಜಿಲ್ಲಾಧಿಕಾರಿ

ಉತ್ತರ ಪ್ರದೇಶ, ಉತ್ತರಾಖಂಡ , ಗೋವಾ, ಮಣಿಪುರ ಮತ್ತು ಪಂಜಾಬ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಮಾರ್ಚ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next