Advertisement
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಮಾಡಿದ ಅವರು, ಡಿ. 12ರಂದು ದೇವದುರ್ಗದಲ್ಲಿ ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಗುವುದು. ಸುಮಾರು 50 ಸಾವಿಕ್ಕಿಂತಲೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಡಿ.14ರಂದು ರಾಯಚೂರು, ಮಾನ್ವಿ, ಲಿಂಗಸುಗೂರು ಹಾಗೂ 15ರಂದು ಮಸ್ಕಿ ಹಾಗೂ ಸಿಂಧನೂರಿಗೆ ಯಾತ್ರೆ ಆಗಮಿಸಲಿದೆ.
ವಿರೋಧಿ ಅಲೆ ಇದೆ. ಸಮೀಕ್ಷೆಗಳು ಕೆಲವು ಪಕ್ಷದ ಪರವಾಗಿ ಹಾಗೂ ವಿರುದ್ಧವಾಗಿ ಬಂದಿವೆ. ಆದರೆ ನಮ್ಮ ಕಾರ್ಯಕರ್ತರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ.
Related Articles
Advertisement
ಮಸ್ಕಿ ಕ್ಷೇತ್ರದಲ್ಲಿ ಮೂರು ಜನರು ಪ್ರಬಲ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪಕ್ಷದಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಆಡಲಿದ್ದಾರೆ ಎಂದು ತಿಳಿಸಿದರು. ಶಾಸಕ ಪ್ರತಾಪಗೌಡ ಪಾಟೀಲ ಅವರು ಬಿಜೆಪಿಯಿಂದ ರಾಜಕೀಯ ನೆಲೆ ಕಂಡುಕೊಂಡಿದ್ದಾರೆ. ಈಗ ಅವರು
ಕಾಂಗ್ರೆಸ್‌ನಲ್ಲಿದ್ದಾರೆ. ಅವರ ಬಗ್ಗೆ ನನಗೆ ಸಾಹಾನೂಭೂತಿ ಇದೆ. ಶಾಸಕ ಪ್ರತಾಪಗೌಡ ಪಾಟೀಲ ಅವರ ಬಿಜೆಪಿ ಸೇರ್ಪಡೆ ವಿಚಾರ ರಾಜ್ಯ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದರು. ಮಸ್ಕಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಮೀನಗಡ ಮಾತನಾಡಿ, ಸ್ಥಳೀಯ ಕಾಂಗ್ರೆಸ್ ಶಾಸಕರು ಬಿಜೆಪಿ
ಸೆರ್ಪಡೆಗೆ ಸ್ಥಳೀಯ ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಮಹಾದೇವಪ್ಪಗೌಡ ಪೊಲೀಸ್‌ಪಾಟೀಲ, ಆರ್. ಬಸನಗೌಡ,
ಜಿಲ್ಲಾ ಘಟಕದ ಕಾರ್ಯದರ್ಶಿ ಸಂಗಮೇಶ ಹತ್ತಿಗುಡ್ಡ, ಬಿಜೆಪಿ ಮಂಡಲ ಕಾರ್ಯದರ್ಶಿ ಶಿವಪುತ್ರಪ್ಪ ಹರಳಹಳ್ಳಿ, ಶರಣಪ್ಪ, ಶಶಿರಾಜ ಮಸ್ಕಿ, ಹರೀಶ, ಊಮಲೂಟಿ, ದುರುಗೇಶ ವಕೀಲ ಸುದ್ದಿಗೋಷ್ಠಿಯಲ್ಲಿದ್ದರು.