Advertisement

ಬಿಜೆಪಿ ಪರಿವರ್ತನಾ ಯಾತ್ರೆ 12 ರಿಂದ ಸಂಚಾರ

04:07 PM Dec 09, 2017 | Team Udayavani |

ಮಸ್ಕಿ: ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ಎಸ್‌ ನೇತೃತ್ವದಲ್ಲಿ ನ. 2ರಿಂದ ಪ್ರಾರಂಭವಾಗಿರುವ ಬಿಜೆಪಿ ಪರಿವರ್ತನಾ ಯಾತ್ರೆ ಡಿ. 12ರಿಂದ ಮೂರು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಎನ್‌. ಶಂಕ್ರಪ್ಪ ತಿಳಿಸಿದರು.

Advertisement

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಮಾಡಿದ ಅವರು, ಡಿ. 12ರಂದು ದೇವದುರ್ಗದಲ್ಲಿ ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಗುವುದು. ಸುಮಾರು 50 ಸಾವಿಕ್ಕಿಂತಲೂ ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಡಿ.14ರಂದು ರಾಯಚೂರು, ಮಾನ್ವಿ, ಲಿಂಗಸುಗೂರು ಹಾಗೂ 15ರಂದು ಮಸ್ಕಿ ಹಾಗೂ ಸಿಂಧನೂರಿಗೆ ಯಾತ್ರೆ ಆಗಮಿಸಲಿದೆ.

ಪರಿವರ್ತನಾ ಯಾತ್ರೆ ಸ್ವಾಗತಕ್ಕೆ ಮಸ್ಕಿ ಕ್ಷೇತ್ರದ ಬಿಜೆಪಿ ಘಟಕ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಡಿ.15ರಂದು ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರಕಾರದ ದುರಾಡಳಿತ ಹಾಗೂ ಸ್ಥಳೀಯ ಶಾಸಕರ ವೈಪಲ್ಯ ಜನರಿಗೆ ತಲುಪಿಸುವ ಮೂಲಕ ಕ್ಷೇತ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗುವುದು ಎಂದು ತಿಳಿಸಿದರು. ಬಿಜೆಪಿ ಪರಿವರ್ತನಾ ಯಾತ್ರೆಗೆ ರಾಜ್ಯದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಈಗ ಬಿಜೆಪಿ ಪರವಾದ ಅಲೆ ಇದೆ ಹಾಗೂ ಕಾಂಗ್ರೆಸ್‌ ಆಡಳಿತ
ವಿರೋಧಿ ಅಲೆ ಇದೆ. ಸಮೀಕ್ಷೆಗಳು ಕೆಲವು ಪಕ್ಷದ ಪರವಾಗಿ ಹಾಗೂ ವಿರುದ್ಧವಾಗಿ ಬಂದಿವೆ. ಆದರೆ ನಮ್ಮ ಕಾರ್ಯಕರ್ತರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. 

ಮುಂದಿನ ವಿಧಾನ ಸಭಾ ಚುಣಾವಣೆಯಲ್ಲಿ 150 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದರೊಂದಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಮಸ್ಕಿ ಕ್ಷೇತ್ರದಲ್ಲಿ ಮೂರು ಜನರು ಪ್ರಬಲ ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಪಕ್ಷದ
ಕಾರ್ಯಕರ್ತರು ಪ್ರಾಮಾಣಿಕವಾಗಿ ಕೆಲಸ ಆಡಲಿದ್ದಾರೆ ಎಂದು ತಿಳಿಸಿದರು.

ಶಾಸಕ ಪ್ರತಾಪಗೌಡ ಪಾಟೀಲ ಅವರು ಬಿಜೆಪಿಯಿಂದ ರಾಜಕೀಯ ನೆಲೆ ಕಂಡುಕೊಂಡಿದ್ದಾರೆ. ಈಗ ಅವರು
ಕಾಂಗ್ರೆಸ್‌ನಲ್ಲಿದ್ದಾರೆ. ಅವರ ಬಗ್ಗೆ ನನಗೆ ಸಾಹಾನೂಭೂತಿ ಇದೆ. ಶಾಸಕ ಪ್ರತಾಪಗೌಡ ಪಾಟೀಲ ಅವರ ಬಿಜೆಪಿ ಸೇರ್ಪಡೆ ವಿಚಾರ ರಾಜ್ಯ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ತಿಳಿಸಿದರು.

ಮಸ್ಕಿ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥ ರೆಡ್ಡಿ ಅಮೀನಗಡ ಮಾತನಾಡಿ, ಸ್ಥಳೀಯ ಕಾಂಗ್ರೆಸ್‌ ಶಾಸಕರು ಬಿಜೆಪಿ
ಸೆರ್ಪಡೆಗೆ ಸ್ಥಳೀಯ ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಮಹಾದೇವಪ್ಪಗೌಡ ಪೊಲೀಸ್‌ಪಾಟೀಲ, ಆರ್‌. ಬಸನಗೌಡ,
ಜಿಲ್ಲಾ ಘಟಕದ ಕಾರ್ಯದರ್ಶಿ ಸಂಗಮೇಶ ಹತ್ತಿಗುಡ್ಡ, ಬಿಜೆಪಿ ಮಂಡಲ ಕಾರ್ಯದರ್ಶಿ ಶಿವಪುತ್ರಪ್ಪ ಹರಳಹಳ್ಳಿ, ಶರಣಪ್ಪ, ಶಶಿರಾಜ ಮಸ್ಕಿ, ಹರೀಶ, ಊಮಲೂಟಿ, ದುರುಗೇಶ ವಕೀಲ ಸುದ್ದಿಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next