ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ದಿನ್ಹತಾ ಪಟ್ಟಣದಲ್ಲಿ ಮಂಗಳವಾರ ರಾತ್ರಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಕೆಲವು ಪೊಲೀಸರು ಸೇರಿದಂತೆ ಹಲವರು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದಯನ್ ಗುಹಾ, ಟಿಎಂಸಿಯ ಶಾಸಕ ದಿನ್ಹತಾ ಮತ್ತು ಉತ್ತರ ಬಂಗಾಳದ ಅಭಿವೃದ್ಧಿ ಸಚಿವ ಮತ್ತು ಕೂಚ್ ಬೆಹಾರ್ ಲೋಕಸಭಾ ಸದಸ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಘರ್ಷಣೆಯ ಸಮಯದಲ್ಲಿ ಹಾಜರಿದ್ದರು ಎನ್ನಲಾಗಿದೆ.
ಪಿಟಿಐ ಪ್ರಕಾರ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಕೆಲವೇ ಹೊತ್ತಿನಲ್ಲಿ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಚುನಾವಣೆ ಘೋಷಣೆಯಾದ ಬಳಿಕ ನಡೆದ ಮೊದಲ ಘರ್ಷಣೆ ಇದಾಗಿದೆ ಎಂದು ಹೇಳಲಾಗಿದೆ.
ಎರಡು ಪಕ್ಷಗಳ ಕಾರ್ಯಕರ್ತರನ್ನು ಚದುರಿಸಲು ಪ್ರಯತ್ನಿಸುತ್ತಿರುವಾಗ ಉಪವಿಭಾಗದ ಪೊಲೀಸ್ ಅಧಿಕಾರಿ (SDPO) ತಲೆಗೆ ಗಾಯವಾಗಿದ್ದು ಅಲ್ಲದೆ ಘರ್ಷಣೆಯ ಸಂದರ್ಭದಲ್ಲಿ ಹಲವಾರು ಅಂಗಡಿಗಳಿಗೆ ಕೂಡ ಹಾನಿಯಾಗಿದೆ ಎಂದು ದಿನ್ಹಟಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಸಂಬಂಧ ಬುಧವಾರ ಬೆಳಗ್ಗೆಯಿಂದ ದಿನ್ಹಟಾದಲ್ಲಿ 24 ಗಂಟೆಗಳ ಬಂದ್ ಆಚರಿಸುವುದಾಗಿ ಟಿಎಂಸಿ ಘೋಷಿಸಿದೆ. ಇತ್ತ ಗುಹಾ ಅವರ ಬಂಧನಕ್ಕೆ ಒತ್ತಾಯಿಸಿ ಆಡಳಿತ ಪಕ್ಷವು ದಿನ್ಹಟಾ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆ: ಶೋಭಾ ಹೇಳಿಕೆಗೆ ಆಕ್ರೋಶ, ಕ್ಷಮೆ ಕೇಳಿದ ಸಚಿವೆ