ಮೀರತ್: “ನನ್ನನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ’- ಹೀಗೆಂದು ಭಾರತೀಯ ಕಿಸಾನ್ ಯೂನಿಯನ್‌ನ ಮುಖಂಡ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ.
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ತಮ್ಮ ಮೇಲೆ ನಡೆದ ದಾಳಿಯೇ ಅದಕ್ಕೆ ಪುರಾವೆ ಎಂದು ಅವರು ಶನಿವಾರ ದೂರಿದ್ದಾರೆ.
ಉತ್ತರ ಪ್ರದೇಶದ ಮೀರತ್‌ನಲ್ಲಿ ಭಾರತೀಯ ಕಿಸಾನ್ ಯೂನಿಯನ್‌ನ ಸಭೆಯಲ್ಲಿ ಮಾತನಾಡಿದ ಅವರು, ನನ್ನನ್ನು ಕೊಲ್ಲುವ ಸಂಚನ್ನು ಅನುಷ್ಠಾನಗೊಳಿಸುವ ಮೂಲಕ ಟಿಕಾಯತ್ ಕುಟುಂಬ ಮತ್ತು ರೈತರ ಸಂಘಟನೆಯನ್ನು ಒಡೆಯಲು ಸಂಚು ರೂಪಿಸಲಾಗಿದೆ.
2021ರ ಡಿಸೆಂಬರ್‌ನಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ಅವರಿಗೆ ಅಂತಿಮ ನಮನ ಸಲ್ಲಿಸಲು ಹೋಗಿದ್ದ ಸಂದರ್ಭದಲ್ಲಿಯೇ ನನ್ನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದಿದ್ದಾರೆ.