Advertisement

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

10:50 PM Sep 18, 2024 | Team Udayavani |

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿನ ಸರಕಾರಗಳನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ, ಅದರ ಮುಂದುವರಿದ ಭಾಗವಾಗಿ ಈಗ “ಒಂದು ರಾಷ್ಟ್ರ ಒಂದು ಚುನಾವಣೆ’ ಮೂಲಕ ಪ್ರಾದೇಶಿಕ ಪಕ್ಷಗಳ ಬೆಳವಣಿಗೆಯನ್ನು ಹತ್ತಿಕ್ಕಲು ಹೊರಟಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

Advertisement

ಪತ್ರಕರ್ತರೊಂದಿಗೆ ಅವರು ಮಾತನಾಡಿ, ಈ ಹಿಂದೆಯೂ ಒಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆ ನಮ್ಮಲ್ಲಿತ್ತು. ನಮ್ಮ ರಾಜ್ಯದಲ್ಲಿಯೂ ಒಟ್ಟಿಗೆ ಚುನಾವಣೆ ಮಾಡಲಾಯಿತು. ಅನಂತರ ಸಾಧ್ಯವಾಯಿತಾ? ಆಗಲಿಲ್ಲ. ಏಕೆಂದರೆ ಒಂದಿಷ್ಟು ಸರಕಾರಗಳು ಸಚಿವ ಸಂಪುಟದಲ್ಲಿ 6 ಹಾಗೂ 3 ತಿಂಗಳು ಮುಂಚಿತವಾಗಿ ಚುನಾವಣೆಗೆ ಹೋಗುತ್ತೇವೆ ಎಂದರು. ಇನ್ನೊಂದಿಷ್ಟು ರಾಜ್ಯಗಳಲ್ಲಿ ಸರಕಾರಗಳೇ ವಿಸರ್ಜನೆಗೊಂಡವು. ಹೀಗಿರುವಾಗ ಈ ವ್ಯವಸ್ಥೆಯನ್ನು ಜಾರಿಗೆ ತರಲು ಹೇಗೆ ಸಾಧ್ಯ? ಎಂದು ಕೇಳಿದರು.

ಬಿಜೆಪಿ ಈ ಪ್ರಯತ್ನ ಮಾಡುತ್ತಿರುವುದು ಸರಿಯಿಲ್ಲ. ಅಲ್ಲದೇ ಮೂರನೇ ಒಂದರಷ್ಟು ಬಹುಮತ ಅವರಿಗಿಲ್ಲ. ಹೀಗಿರುವಾಗ ಕೇಂದ್ರ ಸರಕಾರ ಸರ್ವಪಕ್ಷ ಸಭೆ ಕರೆದು ಒಮ್ಮತದ ಅಭಿಪ್ರಾಯ ಕೇಳಲಿ. ಇದರ ಹೊರತು, ಇಂತಹ ಪ್ರಸ್ತಾವಗಳು ವ್ಯರ್ಥ ಎಂದ ಅವರು, ಇದಕ್ಕಿಂತ ಮುಖ್ಯವಾಗಿ ಕೇಂದ್ರ ಸರಕಾರ ಮೊದಲು ಮಹಿಳಾ ಮೀಸಲಾತಿ ಬಗ್ಗೆ ಕ್ರಮ ತೆಗೆದುಕೊಳ್ಳಲಿ. ಕ್ಷೇತ್ರ ವಿಂಗಡಣೆಗೆ ಕ್ರಮ ತೆಗೆದುಕೊಳ್ಳಲಿ’ ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next