Advertisement

ಇಟಲಿ ಮೂಲದವರನ್ನು ಮೆಚ್ಚಿಸಲು ಈ ಸದಾರಮೆ ನಾಟಕ: ಡಿಕೆಶಿ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

12:46 PM Mar 18, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಬಿಲ್ ವಾಪಸ್ ಪಡೆಯುವ ಬಗ್ಗೆ ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ತಿರುಗಿ ಬಿದ್ದಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, “ ಹಿಂದೂ ವಿರೋಧಿ ಕಾಂಗ್ರೆಸ್” ಎಂದು ಟೀಕೆ ಮಾಡಿದೆ.

Advertisement

ಮಾನ್ಯ ಡಿ.ಕೆ ಶಿವಕುಮಾರ್ ಅವರೇ, ಮತಾಂತರ ನಿಯಂತ್ರಣ ಕಾಯ್ದೆ ರಿವರ್ಸ್‌ ಮಾಡುತ್ತೇವೆ ಎಂದಿದ್ದೀರಿ. ಅಂದರೆ ನೀವು ಹಿಂದೂಗಳನ್ನು ಮತಾಂತರ ಮಾಡಲೆಂದೇ ಒಂದು ಕಾನೂನು ರೂಪಿಸುತ್ತೀರಾ ಎಂದು ಪ್ರಶ್ನಿಸಿದೆ.

ಮತಾಂತರ ನಿಯಂತ್ರಣ ಕಾಯ್ದೆಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆಕ್ರೋಶ ಭರಿತರಾಗಿದ್ದಾರೆ. ಇಟಲಿ ಮೂಲದವರನ್ನು ಮೆಚ್ಚಿಸುವುದಕ್ಕಾಗಿ ಈ ಸದಾರಮೆ ನಾಟಕವೇ? ಹಿಂದೂಗಳು ಮತಾಂತರವಾದರೂ ಪರವಾಗಿಲ್ಲ ಎನ್ನುವ ನಿಮ್ಮ ಹಿಂದೂ ವಿರೋಧಿ‌ ನಿಲುವಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟೀಕೆ ಮಾಡಿದೆ.

ಇದನ್ನೂ ಓದಿ:ಪಾಠ ಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆ; ರಾಜ್ಯದಲ್ಲೂ ಚರ್ಚೆಗೆ ಕಾರಣವಾದ ಗುಜರಾತ್ ನಡೆ!

ಕೆಪಿಸಿಸಿ ಅಧ್ಯಕ್ಷರಿಗೆ ತಮ್ಮದೇ ಕೋಟೆ ಕನಕಪುರ, ಕಪಾಲಿ ಬೆಟ್ಟ, ಹಾರೋಬೆಲೆ ವ್ಯಾಪ್ತಿಯಲ್ಲಿ ಮತಾಂತರದ ಪರವಾಗಿರುವವರ ಮತ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಮತಾಂತರದ ಪರವಾಗಿರುವವರ ಓಲೈಕೆಗಾಗಿ ಮತಾಂತರ ನಿಯಂತ್ರಣ ಕಾಯ್ದೆಯಂತಹ ಜನಸ್ನೇಹಿ ಕಾನೂನಿಗೆ ವಿರೋಧಿಸುತ್ತಿದ್ದೀರಿ ಅಲ್ಲವೇ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next