Advertisement

ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧ : ಜೆಡಿಎಸ್ ಗೆ ಬಿಜೆಪಿ ಟಾಂಗ್

11:10 AM Nov 13, 2021 | Team Udayavani |

ಬೆಂಗಳೂರು: ವಿಧಾನಪರಿಷತ್ ಚುನಾವಣೆಯ ಕಾವು ಏರುತ್ತಿರುವ ವೇಳೆಯಲ್ಲಿ ‘ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ’ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ಗೆ ಶನಿವಾರ ಟಾಂಗ್ ನೀಡಿದೆ.

Advertisement

ಭವಾನಿ ರೇವಣ್ಣ ಅವರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಪ್ಪಿಗೆ ಸೂಚಿಸಿದ್ದಾರೆ.ಕುಟುಂಬ ರಾಜಕಾರಣದ ಇನ್ನೊಂದು ಮುಖ ಅನಾವರಣವೇ? ಎಂದು ಟ್ವೀಟ್ ಮೂಲಕ ಬಿಜೆಪಿ ಪ್ರಶ್ನಿಸಿದೆ.

#ಮಿಷನ್‌ಕುಟುಂಬರಾಜಕಾರಣ ಎಂಬ ಹ್ಯಾಶ್ ಟ್ಯಾಗ್ ಬಳಸಿ ”ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ..ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ..ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ.” ಎಂದು ಟ್ವೀಟ್ ಮಾಡಿದೆ.

”ಓಲೈಕೆ ರಾಜಕಾರಣ ಕಾಂಗ್ರೆಸ್ ಸಿದ್ಧಾಂತ. ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ.ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಈ ಎರಡು ಪಕ್ಷಗಳು ಕುಟುಂಬವಾದಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ.”ಎಂದು ಬಿಜೆಪಿ ಟ್ವೀಟ್ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next