Advertisement

ಮಾದಪ್ಪನ ಬೆಟ್ಟದಿಂದ ವಿಜಯಸಂಕಲ್ಪ ಯಾತ್ರೆ

12:23 PM Feb 27, 2023 | Team Udayavani |

ಮೈಸೂರು: ರಾಜ್ಯ ದಲ್ಲಿ ಮತ್ತೂಮ್ಮೆ ಬಿಜೆಪಿ ಅಧಿಕಾರದ ಗದ್ದುಗೆ ಏರಲು ರಾಜ್ಯದಾದ್ಯಂತ ನಾಲ್ಕು ಕಡೆಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದ್ದು, ಮಾರ್ಚ್‌ 1ರಂದು ಚಾಮ ರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಿಂದ ಯಾತ್ರೆ-1 ಆರಂಭವಾಗಲಿದೆ. ಅಂದು ಮಲೆಮಹದೇಶ್ವರ ಬೆಟ್ಟದಲ್ಲಿ ಬೆಳಗ್ಗೆ 11ಕ್ಕೆ ಬಿಜೆಪಿ ರಾಷೀಯ ಅಧ್ಯಕ್ಷ ಜೆ.ಪಿ. ನಡ್ಡಾ ಯಾತ್ರೆಗೆ ಚಾಲನೆ ನೀಡುವರು ಎಂದು ವಿಜಯ ಸಂಕಲ್ಪ ಯಾತ್ರೆಯ ಮೈಸೂರು ವಿಭಾಗದ ಸಂಚಾಲಕರೂ ಆಗಿರುವ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಹೇಳಿದರು.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿ ಮಾತ ನಾ ಡಿದ ಅವರು, ವಿಜಯ ಸಂಕಲ್ಪ ಯಾತ್ರೆ ಮೂಲಕ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕೂಡ ಬಿಜೆಪಿ ಸರ್ಕಾರದ ಸಾಧನೆ ಹಾಗೂ ಜನ ತೆಗೆ ನೀಡಿ ರುವ ಸವಲತ್ತುಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.

ನಾಲ್ಕು ತಂಡಗಳಿಂದ ಯಾತ್ರೆ: ವಿಜಯ ಸಂಕಲ್ಪ ಯಾತ್ರೆಯನ್ನು ನಾಲ್ಕು ತಂಡಗಳಾಗಿ ಮಾಡಲಾ ಗಿದ್ದು, ಮೊದಲನೇ ತಂಡ ಮಾ.1 ರಂದು ಚಾಮ ರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಸೋಲಿಗ ಸಮುದಾಯದವರನ್ನು ಸೇರಿಸುವ ಮೂಲಕ ಕಾರ್ಯಕ್ರಮ ಪ್ರಾರಂಭವಾಗುತ್ತದೆ. ನಂತರ ಅದೇ ದಿನ ಹನೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಸುಮಾರು 15 ರಿಂದ 20 ಸಾವಿರ ಜನರು ಭಾಗವಹಿಸಲಿದ್ದಾರೆ. ಜೆಪಿ ನಡ್ಡಾ ಸಭೆಯನ್ನುದ್ದೇಶಿಸಿ ಮಾತನಾಡುವರು.

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಸಚಿವರಾದ ವಿ.ಸೋಮಣ್ಣ, ವಿ. ಸುನೀಲ್‌ ಕುಮಾರ್‌, ಕೋಟಾ ಶ್ರೀನಿವಾಸ ಪೂಜಾರಿ, ಅರಗ ಜ್ಞಾನೇಂದ್ರ, ಕೆ.ಗೋಪಾಲಯ್ಯ, ಎಸ್‌.ಅಂಗಾರ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್‌, ಶಾಸಕ ಎನ್‌.ಮಹೇಶ್‌, ರಾಜ್ಯ ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನ ಸೇರಿದಂತೆ ರಾಜ್ಯದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ದೊಡ್ಡ ಮಟ್ಟದ ರ್ಯಾಲಿ: ದಾವಣಗೆರೆಯಲ್ಲಿ ನಾಲ್ಕು ತಂಡಗಳ ವಿಜಯ ಸಂಕಲ್ಪ ಯಾತ್ರೆ ಅಂತಿಮವಾಗ ಲಿದ್ದು, ಈ ಕಾರ್ಯಕ್ರಮದಲ್ಲಿ ಅಂದಾಜು 15 ರಿಂದ 20 ಲಕ್ಷ ಸೇರಿ ದೊಡ್ಡ ಮಟ್ಟದ ರ್ಯಾಲಿ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾಗಿಯಾಗಲಿದ್ದಾರೆ ಎಂದು ವಿವರಿಸಿದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ, ಕಾಂಪೋಸ್ಟ್ ನಿಗಮದ ಅಧ್ಯಕ್ಷ ಎಸ್‌. ಮಹದೇವಯ್ಯ, ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್‌, ಪ್ರಧಾನ ಕಾರ್ಯದರ್ಶಿ ಮಡಹಳ್ಳಿ ಮಹೇಶ್‌, ಮಾಧ್ಯಮ ಸಂಚಾಲಕ ಗೋಪಾಲಯ್ಯ, ಮೈಸೂರು ನಗರ ಮಾಧ್ಯಮ ವಕ್ತಾರರಾದ ಮಹೇಶ್‌ ರಾಜೇ ಅರಸ್‌, ಪ್ರದೀಪ್‌ ಕುಮಾರ್‌ ಇತರರು ಇದ್ದರು.

18 ಕಡೆ ಸಭೆ, 35 ರಿಂದ 40 ಕಡೆ ರೋಡ್‌ ಶೋ : ಯಾತ್ರೆ ಯ ಮೊದಲ ತಂಡವು ಸುಮಾರು 58 ವಿಧಾನಸಭಾ ಕ್ಷೇತ್ರಗಳಲ್ಲಿ 18 ಕಡೆ ಸಭೆ ಹಾಗೂ 35 ರಿಂದ 40 ಕಡೆ ರೋಡ್‌ ಶೋ ಮಾಡ ಲಿದೆ. ಮಾ.1 ರಿಂದ 2 ರವರೆಗೆ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ನಂಜನಗೂಡಿನಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯುತ್ತದೆ. ಮಾ.3 ರಿಂದ 5 ರವರೆಗೆ ಮೈಸೂರು ಗ್ರಾವಾಂತರ ಹಾಗೂ ಮೈಸೂರು ನಗರದಲ್ಲಿ ನಡೆಯಲಿದ್ದು, ನಂತರ ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮುಖಾಂತರ ದಾವಣಗೆರೆಯ ಹರಿಹರದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಂಪನ್ನವಾಗುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next