Advertisement
ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ. ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಮತ್ತೂಂದೆಡೆ, ಎನ್‌ಡಿಎ ಮಿತ್ರಕೂಟಕ್ಕೆ ಬೆಂಬಲ ಸೂಚಿಸಿರುವ ದಳಪತಿಗಳ (ಜೆಡಿಎಸ್) ನಿಯೋಗ ಪ್ರಥಮ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚಿಸಿತು.
Related Articles
2024ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಗುರುವಾರದ ಭೇಟಿ ವೇಳೆ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ ಎಂದು ಹೇಳಿದ್ದಾರೆ.
Advertisement
ಗೆಲುವಿನ ರಣತಂತ್ರ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ವಿಜಯೇಂದ್ರ, ಶಾ ಅವರ ರಾಷ್ಟ್ರಭಕ್ತಿ-ಪಕ್ಷ ನಿಷ್ಠೆ, ನಿಮ್ಮ ಧ್ಯೇಯ, ಬದ್ಧತೆ, ಆತ್ಮ ವಿಶ್ವಾಸ, ಗುರಿ ಮುಟ್ಟುವ ಛಲ, ಗೆಲುವಿನ ರಣತಂತ್ರ ನಮ್ಮಂಥ ಯುವಕರಿಗೆ ನಿತ್ಯ ಸ್ಫೂರ್ತಿಯಾಗಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಾಧನೆಗಾಗಿ ಆತ್ಮೀಯ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ. ಅಮಿತ್ ಶಾ ಭೇಟಿ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಂಸದರಾದ ಪ್ರತಾಪಸಿಂಹ, ಮುನಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.