Advertisement
ಈಗಾಗಲೇ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಹಲವು ರೀತಿಯ ಹೋರಾಟಕ್ಕೆ ಮುಂದಾಗಿದೆ. ಈ ಹೊತ್ತಿನಲ್ಲಿ ಹಿರಿಯ ನಾಯಕ, ಶಾಸಕ ಯತ್ನಾಳ್ ಭಿನ್ನರಾಗ ಎತ್ತಿರುವುದು ರಾಜ್ಯ ಬಿಜೆಪಿಗೆ ಇರಿಸುಮುರಿಸು ತಂದಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಭೇಟಿ ಕುತೂಹಲ ಕೆರಳಿಸಿದೆ.
ಇದರ ಬೆನ್ನಲ್ಲೇ ಯತ್ನಾಳ್ ತಂಡವು ವಕ್ಫ್ ನೋಟಿಸ್ ವಿರುದ್ಧ ಒಂದು ತಿಂಗಳ ಕಾಲ ಜನಜಾಗೃತಿ ಅಭಿಯಾನವನ್ನು ಪ್ರತ್ಯೇಕವಾಗಿ ಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿತ್ತು. ಇದು ಪಕ್ಷದ ವಲಯದಲ್ಲಿ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಅಲ್ಲದೆ ವಿಜಯೇಂದ್ರ ಅವರಿಗೆ ಸೆಡ್ಡು ಹೊಡೆಯುವ ಸಂಬಂಧ ಈ ಹೋರಾಟವನ್ನು ರೂಪಿಸಲಾಗಿದೆ ಎಂದೇ ಬಿಂಬಿಸಲಾಗಿತ್ತು. ಇದಕ್ಕೆ ಕಡಿವಾಣ ಹಾಕುವ ಹಾಗೂ ಇದರಿಂದ ಪಕ್ಷಕ್ಕೆ ಆಗುತ್ತಿರುವ ಹಾನಿಯನ್ನು ತಪ್ಪಿಸುವ ಸಂಬಂಧ ಸೂಕ್ತ ಸೂಚನೆ ನೀಡುವಂತೆ ಹೈಕಮಾಂಡ್ ನಾಯಕರಿಗೆ ವಿಜಯೇಂದ್ರ ಮನವಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Related Articles
ಇನ್ನು ಬೆಳಗಾವಿ ಅಧಿವೇಶನ ಸಮೀಪಿಸುತ್ತಿದ್ದು, ರಾಜ್ಯ ಸರಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತೀರ್ಮಾನಿಸಿದೆ. ಮುಡಾ ಹಗರಣ, ವಕ್ಫ್ ನೋಟಿಸ್ ಗೊಂದಲ ಹಾಗೂ ವಾಲ್ಮೀಕಿ ಹಗರಣಗಳ ಬಗ್ಗೆ ಧ್ವನಿ ಎತ್ತಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸಂಬಂಧ ಹೈಕಮಾಂಡ್ ನಾಯಕರ ಸಲಹೆ – ಸೂಚನೆಗಳನ್ನು ಇದೇ ವೇಳೆ ವಿಜಯೇಂದ್ರ ಕೇಳಲಿದ್ದಾರೆ ಎನ್ನಲಾಗಿದೆ.
Advertisement
ವಕ್ಫ್ ಹೋರಾಟ ಕುರಿತು ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿಲ್ಲ. ನಾವ್ಯಾರು “ಕ್ರೆಡಿಟ್ ವಾರ್’ ನಡೆಸುತ್ತಿಲ್ಲ. ನಮ್ಮ ಹೋರಾಟದಲ್ಲಿ ಯತ್ನಾಳ್ ಕೂಡ ಭಾಗವಹಿಸಲಿದ್ದಾರೆ. ಯಾರು ಮೊದಲು ಹೋರಾಟ ಆರಂಭಿಸಿದರು ಎಂಬುದು ಮುಖ್ಯವಲ್ಲ. ಪ್ರಧಾನಿ ಮೋದಿ ವಕ್ಫ್ ತಿದ್ದುಪಡಿ ತರಲು ಹೊರಟಿದ್ದಾರೆ. ಅದಕ್ಕೆ ಪೂರಕವಾಗಿ ಹೋರಾಟ ನಡೆಸಲಾಗುತ್ತಿದೆ.-ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ