Advertisement
ಮತ್ತೂಂದೆಡೆ ಕಾಂಗ್ರೆಸ್ ನಿಯೋಗ, ರಾಜ್ಯದ ಅಭಿವೃದ್ಧಿ ಕೆಲಸ ನಿರ್ಲಕ್ಷ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಬಿಜೆಪಿಯು ಉಪ ಚುನಾವಣೆಯಲ್ಲಿ ಆಡಳಿತ ಯಂತ್ರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣ ಪ್ರಚಾರದ ವೇಳೆ ಮತವನ್ನು ಮಾರಿಕೊಳ್ಳಿ ಎಂಬಂತೆ ಮತದಾರರಿಗೆ ಸಲಹೆ ನೀಡುವ ಹೇಳಿಕೆ ನೀಡಿದ್ದು, ಉಪ ಚುನಾವಣೆ ಮುಗಿಯುವವರೆಗೆ ಅವರು ಸಾರ್ವಜನಿಕ ಚುನಾವಣ ಭಾಷಣ ಮಾಡದಂತೆ ಸೂಚನೆ ನೀಡಬೇಕು ಎಂದು ಕೋರಿ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ಹಿರೇಕೆರೂರು ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಿದ್ದು, “ಬಿ.ಸಿ. ಪಾಟೀಲ್‌ರಿಂದ ನೋಟು ತಗೊಳ್ಳಿ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್ ಅವರಿಗೆ ಓಟು ಹಾಕಿ. ಮುಂಬಯಿ ನೋಟು ಕೈಗೆ ಓಟು’ ಎಂದು ಹೇಳಿಕೆ ನೀಡಿದ್ದರು. ಕಾಂಗ್ರೆಸ್ ದೂರು
ಪೂರ್ತಿ ಸರಕಾರ ಉಪ ಚುನಾವಣೆಯಲ್ಲಿ ಭಾಗಿಯಾಗಿ, ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿ ಕೊಳ್ಳುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೆಪಿಸಿಸಿ ವತಿಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲ ವಜೂಭಾç ವಾಲಾ ಅವರ ಅನಾರೋಗ್ಯ ಕಾರಣದಿಂದಾಗಿ ಅಂಚೆ ಮೂಲಕ ಎಂಎಲ್‌ಸಿ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿತು.