ಬೆಂಗಳೂರು: “ಕೆಲವೇ ದಿನಗಳಲ್ಲಿ ಬಿಜೆಪಿಯ ಉದ್ದೇಶಗಳು ಏನು ಎಂಬುದು ಜನರಿಗೆ ತಿಳಿಯಲಿದ್ದು, ರಾಷ್ಟ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದ ಮಾರಪ್ಪನಪಾಳ್ಯದ ತ್ಯಾಜ್ಯ ಘಟಕ ಉನ್ನತೀಕರಣ ಒಡಂಬಡಿಕೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕಾಂಗ್ರೆಸ್ 132 ವರ್ಷಗಳ ಇತಿಹಾಸವಿರುವ ಪಕ್ಷವಾಗಿದ್ದು, ಸೋಲು-ಗೆಲುವು ಎರಡನ್ನೂ ಕಂಡಿದೆ.
ಮನಮೋಹನ್‌ಸಿಂಗ್ ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ್ದರು. ಜನರಿಗೆ ಬದಲಾವಣೆ ಬೇಕಾಗಿದ್ದರಿಂದ ಬಿಜೆಪಿಗೆ ಬಹುಮತ ಕೊಟ್ಟಿದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಎಲ್ಲ ನಾಯಕರೊಂದಿಗೆ ಚರ್ಚೆ ಮಾಡಿದ್ದೇವೆ. ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಿರಿಯ ನಾಯಕರೊಂದಿಗಿನ ಸಭೆಯಲ್ಲಿ ಪಕ್ಷದ ಆಂತರಿಕ ವಿಚಾರ ಚರ್ಚೆ ಮಾಡಿದ್ದೇವೆ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ